ಸಾರಾಂಶ
ಮಲೆನಾಡಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಳ ಎಚ್.ಸಿ. ಕಲ್ಮರುಡಪ್ಪ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯ ಮಲೆನಾಡಿನಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸ್ಥಳಾಂತರ ಮಾಡದೆ ಹೋದರೆ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಗೋ ಬ್ಯಾಕ್ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ. ಕಲ್ಮರುಡಪ್ಪ ಎಚ್ಚರಿಕೆ ನೀಡಿದ್ದಾರೆ.
ಮಲೆನಾಡಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಳವಾಗಿದೆ. ರೈತರಿಗೆ ಹಾಗೂ ಬೆಳೆಗಾರರಿಗೆ ಅಪಾರ ಹಾನಿ ಸಂಭವಿಸಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಜಿಲ್ಲಾ ಕೇಂದ್ರದ ಸಮೀಪದ ಮೆಣಸಿನ ಮಲ್ಲೇದೇವರಹಳ್ಳಿ, ಆಲದಗುಡ್ಡೆ, ವಸ್ತಾರೆ, ಕೆಸವಿನಮನೆ, ಮೂಗ್ತಿಹಳ್ಳಿ, ಕದ್ರಿಮಿದ್ರಿ ಕಂಚಿನಹಳ್ಳಿ, ಕೆ.ಆರ್. ಪೇಟೆ, ಕಂಬಿಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶದಲ್ಲಿ ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳು ಬೀಡಿ ಬಿಟ್ಟಿವೆ. ಆನೆಗಳ ಓಡಾಟದಿಂದ ಬತ್ತದ ಗದ್ದೆಗಳಲ್ಲಿ ಗುಂಡಿ ಗೊಟರುಗಳಾಗಿವೆ. ಕಾಫಿ ಗಿಡಗಳನ್ನು ಬೇರು ಸಹಿತ ಕಿತ್ತು ಹಾಕಿವೆ ಎಂದರು.
ಕಾಡಾನೆಗಳ ಹಾವಳಿ ಅತಿಯಾಗಿದೆ. ಆದರೂ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕರೆದು ಸೂಕ್ತ ನಿರ್ದೇಶನ ನೀಡಿಲ್ಲ. ಅವರು ತೋಟಕ್ಕೆ ಮಾತ್ರ ಬಂದು ಹೋಗುತ್ತಿದ್ದಾರೆ. ಜಿಲ್ಲಾಡಳಿತವೂ ಕೂಡ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಜಿಲ್ಲಾಡಳಿತ ನಿಷ್ಕ್ರೀಯವಾಗಿದೆ. ಈ ಕುರಿತು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.ಕಾಡಾನೆಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು, ಇಲ್ಲದೆ ಹೋದರೆ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಶಾಸಕರ ವಿರುದ್ಧ ಗೋ ಬ್ಯಾಕ್ ಚಳುವಳಿ ರೂಪಿಸಲು ಸಧ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಸುದ್ಧಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸೀತರಾಮ ಭರಣ್ಯ, ಹಿರೇಮಗಳೂರು ಪುಟ್ಟಸ್ವಾಮಿ, ಉಮೇಶ್, ದಿನೇಶ್, ನಾಗರಾಜ್ ಇದ್ದರು. 30 ಕೆಸಿಕೆಎಂ 2