866 ಸರ್ಕಾರಿ ಶಾಲೆಗಳಲ್ಲಿ ಗೋ ಹಸಿರು ಕ್ರಾಂತಿ ಕಾರ್ಯಕ್ರಮ

| Published : Sep 13 2024, 01:35 AM IST

866 ಸರ್ಕಾರಿ ಶಾಲೆಗಳಲ್ಲಿ ಗೋ ಹಸಿರು ಕ್ರಾಂತಿ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯ 866 ಸರ್ಕಾರಿ ಶಾಲೆಗಳಲ್ಲಿ ಗೋ ಹಸಿರು ಕ್ರಾಂತ್ರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ಹೇಳಿದರು. ನಗರದ ಡಯಟ್ ವತಿಯಿಂದ ಬಿಆರ್ ಸಿ ಮತ್ತು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಿಗೆ ಗೋ ಹಸಿರು ಕ್ರಾಂತಿ ಕಾರ್ಯಕ್ರಮ ಅನುಷ್ಠಾನ ಸಂಬಂಧ ಆಯೋಜಿಸಿದ್ದ ಗೂಗಲ್ ಸಭೆಯಲ್ಲಿ ಮಾತನಾಡಿದ ಅವರು, ಪರಿಸರವನ್ನು ಮಾಲಿನ್ಯತೆಯಿಂದ ಮುಕ್ತಗೊಳಿಸಿ, ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗಜಿಲ್ಲೆಯ 866 ಸರ್ಕಾರಿ ಶಾಲೆಗಳಲ್ಲಿ ಗೋ ಹಸಿರು ಕ್ರಾಂತ್ರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ಹೇಳಿದರು. ನಗರದ ಡಯಟ್ ವತಿಯಿಂದ ಬಿಆರ್ ಸಿ ಮತ್ತು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಿಗೆ ಗೋ ಹಸಿರು ಕ್ರಾಂತಿ ಕಾರ್ಯಕ್ರಮ ಅನುಷ್ಠಾನ ಸಂಬಂಧ ಆಯೋಜಿಸಿದ್ದ ಗೂಗಲ್ ಸಭೆಯಲ್ಲಿ ಮಾತನಾಡಿದ ಅವರು, ಪರಿಸರವನ್ನು ಮಾಲಿನ್ಯತೆಯಿಂದ ಮುಕ್ತಗೊಳಿಸಿ, ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು.ಭವಿಷ್ಯದ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಲು ಪ್ಲಾಸ್ಟಿಕ್ ನಿಷೇಧ, ಬಟ್ಟೆ ಬ್ಯಾಗ್ ಬಳಕೆ, ವಾಯು ಮಾಲಿನ್ಯ, ಜಲ ಮಾಲಿನ್ಯ, ಭೂಮಿಯ ಸವಕಳಿ ತಡೆಗಟ್ಟುವಿಕೆ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರ ನಾಯಕತ್ವದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ಮನವಿ ಮಾಡಿದರು.

ಮಕ್ಕಳಲ್ಲಿ ಅರಣ್ಯ ಸಂಪತ್ತಿನ ಪ್ರಾಮುಖ್ಯತೆ ಅರಿವನ್ನು ಮೂಡಿಸಬೇಕು. ಈ ಸಂಬಂಧ ಸೆಪ್ಟೆಂಬರ್ 18 ರಂದು ಗೋ ಗ್ರೀನ್ ರೆವಲ್ಯೂಷನ್ ಸಂಸ್ಥೆಯವರು ಬಿಆರ್ ಸಿ ಮತ್ತು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರಿಗೆ ತರಬೇತಿ ನೀಡಲಿದ್ದಾರೆ. ಬಿಆರ್ ಸಿಯವರು ಪ್ರತಿ ತಾಲೂಕಿನಿಂದ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಉಪನ್ಯಾಸಕರಾದ ಎಸ್. ಬಸವರಾಜು, ರಂಗಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಸಂಪತ್‌ಕುಮಾರ್, ಸುರೇಂದ್ರನಾಥ್, ತಿಪ್ಪೇಸ್ವಾಮಿ, ತಿಪ್ಪೇರುದ್ರಪ್ಪ, ಶ್ರೀನಿವಾಸ್, ತಿಪ್ಪೇಸ್ವಾಮಿ ತಾಂತ್ರಿಕ ಸಹಾಯಕ ಅವಿನಾಶ್ ಇದ್ದರು.