ವಿದ್ಯಾರ್ಥಿಗಳು ಸಾಧನೆ ಮಾಡಲು ಗುರಿ ಮುಖ್ಯ

| Published : Nov 10 2024, 02:06 AM IST / Updated: Nov 10 2024, 02:07 AM IST

ಸಾರಾಂಶ

ಜೀವನಕ್ಕೆ ಶಿಕ್ಷಣ ಮುಖ್ಯ, ಜೀವನದಲ್ಲಿ ಗಳಿಸಿದ ಆಸ್ತಿ ಸಂಪತ್ತು ಬೇರೆಯವರ ಪಾಲಾಗಬಹುದು ಆದರೆ, ಕಲಿತ ಶಿಕ್ಷಣ ಮಾತ್ರ ಬೇರೆಯವರ ಪಾಲಾಗುವುದಿಲ್ಲ. ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಸಾಧನೆ ಮಾಡಿದವರ ಇತಿಹಾಸ ಅರಿತುಕೊಳ್ಳಬೇಕು. ಸಾಧನೆ ಹಿಂದಿನ ರಹಸ್ಯ ಅರಿತುಕೊಳ್ಳಬೇಕು

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ವಿದ್ಯಾರ್ಥಿಗಳು ಮಾನಸಿಕ ಚಂಚಲತೆನೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು, ಸ್ಪಷ್ಟ ಗುರಿಯೊಂದಿಗೆ ನಿರಂತರವಾಗಿ ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ನಿಮ್ಮ ಗುರಿಯನ್ನು ಖಂಡಿತವಾಗಿ ಮುಟ್ಟಬಹುದು ಎಂದು ಶಾಸಕ ಕೆಎಚ್.ಪುಟ್ಟಸ್ವಾಮಿಗೌಡ ತಿಳಿಸಿದರು. ಅವರು ನಗರದ ಸಮಾನತಾ ಸೌಧದಲ್ಲಿನ ಶಾಸಕರ ಮಾದರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆಗಿನ ಸಂವಾದಲ್ಲಿ ಮಾತನಾಡಿದರು.ಇತಿಹಾಸ ಅರಿತುಕೊಳ್ಳಬೇಕು

ಜೀವನಕ್ಕೆ ಶಿಕ್ಷಣ ಮುಖ್ಯ, ಜೀವನದಲ್ಲಿ ಗಳಿಸಿದ ಆಸ್ತಿ ಸಂಪತ್ತು ಬೇರೆಯವರ ಪಾಲಾಗಬಹುದು ಆದರೆ, ಕಲಿತ ಶಿಕ್ಷಣ ಮಾತ್ರ ಬೇರೆಯವರ ಪಾಲಾಗುವುದಿಲ್ಲ. ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಸಾಧನೆ ಮಾಡಿದವರ ಇತಿಹಾಸ ಅರಿತುಕೊಳ್ಳಬೇಕು. ಸಾಧನೆ ಹಿಂದಿನ ರಹಸ್ಯಗಳು ಅರಿತುಕೊಳ್ಳುವ ಮೂಲಕ ಉನ್ನತ ಸಾಧನೆಗೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರುನಮ್ಮ ತಾಲೂಕಿನ ವಿದ್ಯಾರ್ಥಿಗಳಿಗೆ ತಮ್ಮ ಮಹತ್ವಾಕಾಂಕ್ಷೆಯ ಐಎಎಸ್, ಐಪಿಎಸ್, ಕೆಎಎಸ್, ಪಿಎಸ್ಐ ಮುಂತಾದ ಹುದ್ದೆಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸುಲಲಿತವಾಗಿ ಎದುರಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕೇಂದ್ರವನ್ನು ಪ್ರಾರಂಭಮಾಡಲಾಗಿದೆ. ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಅಧ್ಯಯನ ನಡೆಸಲು ಗ್ರಂಥಾಲಯ, ಕಂಪ್ಯೂಟರ್, ವೈಫೈ ಸಂಪರ್ಕ, ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಒದಗಿಸುತ್ತಿದ್ದೇವೆ. ವಿದ್ಯಾರ್ಥಿಗಳು ಇವುಗಳನ್ನು ಉಪಯೋಗಿಸಿಕೊಂಡು ನಿಮ್ಮ ಕನಸನ್ನು ನನಸು ಮಾಡಿಕೊಂಡು ದೇಶ ಕಟ್ಟುವ ಕೆಲಸ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಶಾಸಕರ ಮಾದರಿ ಸ್ಪರ್ಧಾತ್ಮಕ ತರಬೇತಿ ಕೇಂದ್ರದ ರೂವಾರಿಗಳಾದ ತಹಸೀಲ್ದಾರ್ ಮಹೇಶ್ ಎಸ್ ಪತ್ರಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಬರ ಪೀಡಿತ ಪ್ರದೇಶಗಳಲ್ಲಿ ಒಂದಾದ ಈ ತಾಲೂಕಿನಲ್ಲಿ ಅದರಲ್ಲೂ ಗ್ರಾಮಾಂತರ ಭಾಗದಲ್ಲಿ ಜನರು ಆರ್ಥಿಕವಾಗಿ ಬಹಳ ಹಿಂದುಳಿದಿದ್ದಾರೆ. ಮಕ್ಕಳಿಗೆ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೊಡಿಸಲಾಗದೆ ಕೈ ಚೆಲ್ಲಿದ ಉದಾಹರಣೆಗಳಿವೆ ಎಂದರು.

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ತಾಲೂಕಿನ ವಿದ್ಯಾರ್ಥಿಗಳಿಗಾಗಿ,ಕ್ಷೇತ್ರದ ಶಾಸಕರು ನಗರದಲ್ಲಿ ಸ್ಪರ್ಧಾತ್ಮಕ ತರಬೇತಿ ಕೇಂದ್ರವನ್ನು ಪ್ರಾರಂಭ ಮಾಡಿಸಿ, ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ವಿದ್ಯಾರ್ಥಿಗಳಿಗೆ ತರಬೇತಿ ಕೊಡಿಸುತ್ತಿದ್ದು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟವನ್ನು ನೀಡುತ್ತಿದ್ದಾರೆ ಎಂದರು.ಇದೇ ಸಂಧರ್ಭದಲ್ಲಿ ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರನ್ನು ವಿದ್ಯಾರ್ಥಿಗಳ ಪೋಷಕರು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಚನ್ನಪ್ಪ,ಭಕ್ತರಹಳ್ಳಿ ಚಂದ್ರಣ್ಣ, ರಾಮಚಂದಯ್ಯ ಇನ್ನಿತರರು ಭಾಗವಹಿಸಿದ್ದರು.