ಧಾರ್ಮಿಕ ಕಾರ್ಯಗಳಿಗೆ ಭಗವಂತನ ಆಶೀರ್ವಾದ ಸದಾ ಇರುತ್ತದೆ. ನಾನು ಶಿವನ ಆರಾಧಕನಾಗಿರುವುದರಿಂದ ಇಂತಹ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಶಿವನೇ ಪ್ರೇರಣೆ ನೀಡಿರಬೇಕು ಎಂದು ಮಾಡೂರು ಮರಿಯಣ್ಣಪಾಲಿನ ಶ್ರೀ ಶಿವದುರ್ಗಾಂಭ ಮಠದ ಪರಮಪೂಜ್ಯ ಶಿವಯೋಗಿ ಶ್ರೀ ದುರ್ಗಾನಂದ ಸ್ವಾಮೀಜಿ ಹೇಳಿದರು.

ಕನ್ನಡಪ್ರಭವಾರ್ತೆ : ಧಾರ್ಮಿಕ ಕಾರ್ಯಗಳಿಗೆ ಭಗವಂತನ ಆಶೀರ್ವಾದ ಸದಾ ಇರುತ್ತದೆ. ನಾನು ಶಿವನ ಆರಾಧಕನಾಗಿರುವುದರಿಂದ ಇಂತಹ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಶಿವನೇ ಪ್ರೇರಣೆ ನೀಡಿರಬೇಕು ಎಂದು ಮಾಡೂರು ಮರಿಯಣ್ಣಪಾಲಿನ ಶ್ರೀ ಶಿವದುರ್ಗಾಂಭ ಮಠದ ಪರಮಪೂಜ್ಯ ಶಿವಯೋಗಿ ಶ್ರೀ ದುರ್ಗಾನಂದ ಸ್ವಾಮೀಜಿ ಹೇಳಿದರು.

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ತೊಕ್ಕೊಟ್ಟು ಚೆಂಬುಗುಡ್ಡೆಯ ಶ್ರೀ ಕೊರಗತನಿಯ ಕ್ಷೇತ್ರದ ದೈವದ ಭಂಡಾರ ಗುಡಿ ಹಾಗೂ ಶ್ರೀ ಕೊರಗತನಿಯ ಮತ್ತು ಶ್ರೀ ಗುಳಿಗ ದೈವಗಳ ಕಟ್ಟೆಗಳ ನವನಿರ್ಮಾಣ ಕಾರ್ಯಕ್ಕೆ ಭಾನುವಾರ ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು.

ನಾನು ಕಾರ್ಯಕ್ರಮವೊಂದರ ನಿಮಿತ್ತ ಶಿರಸಿಗೆ ತೆರಳಬೇಕಾಗಿತ್ತು. ಆದರೆ, ನನ್ನ ಊರಿನ ಕಾರ್ಯಕ್ರಮಕ್ಕೆ ಮೊದಲ ಆದ್ಯತೆ ನೀಡುವ ಉದ್ದೇಶದಿಂದ ಇಲ್ಲಿಗೆ ಆಗಮಿಸಿದ್ದೇನೆ ಎಂದರು.ಸೋಮೇಶ್ವರ ಶ್ರೀ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರನಾಥ ರೈ ಅಧ್ಯಕ್ಷತೆ ವಹಿಸಿದ್ದರು.ಕುತ್ತಾರು ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಟ್ರಸ್ಟ್ ಅಧ್ಯಕ್ಷ ಮಹಾಬಲ ಹೆಗ್ಡೆ ದೆಬ್ಬೇಲಿ, ದೇರಳಕಟ್ಟೆ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಗುರುಸ್ವಾಮಿ ವಿಶ್ವನಾಥ ಕಾಯರ್ ಪಳಿಕೆ, ಉಳ್ಳಾಲ ಶ್ರೀ ಚೀರುಂಭ ಭಗವತಿ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ, ಕೊಲ್ಯ ಶ್ರೀ ಮೂಕಾಂಬಿಕಾ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಇನೋಳಿ ಶ್ರೀ ಸೋಮನಾಥ ದುರ್ಗಾಪರಮೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರ ಕಿಲ್ಲೂರುಗುತ್ತು ಚಂದ್ರಹಾಸ ಪೂಂಜಾ, ಕುತ್ತಾರು ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಅಧ್ಯಕ್ಷ ಪವಿತ್ರ ಕುಮಾರ್ ಗಟ್ಟಿ, ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ನಿತೇಶ್ ಹೊಸಗದ್ದೆ, ಗಣೇಶ್ ಅರಸು ಹಿತ್ಲು, ಮಾಡೂರು ಪಾಡಾಂಗರ ಭಗವತಿ ಕ್ಷೇತ್ರದ ಕಾರ್ಯದರ್ಶಿ ನಿಶಿತ್ ಬೋಳಾರ್, ದೈವನರ್ತಕ ದಯಾನಂದ ಶಂಭೂರು, ಹಿರಿಯರಾದ ಬಾಲಕೃಷ್ಣ ಶೆಟ್ಟಿ ಉಳ್ಳಾಲಗುತ್ತು, ದಾಮೋದರ ಸುವರ್ಣ, ಕೊರಗಜ್ಜ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಪ್ರವೀಣ್ ರೈ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸೂರಜ್ ಕೋಟೆಕಾರು ಹಾಗೂ ಮಹಿಳಾ ಸಮಿತಿ ಅಧ್ಯಕ್ಷೆ ಸುಮಲತಾ ಕೊಣಾಜೆ ಇದ್ದರು.ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೆರೆಬೈಲ್ ಸ್ವಾಗತಿಸಿದರು. ಕಾರ್ಯದರ್ಶಿ ಪುಷ್ಪರಾಜ್ ಕೆರೆಬೈಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಕಾರ್ಯಕ್ರಮ ನಿರೂಪಿಸಿದರು. ಆಡಳಿತ ಸಮಿತಿಯ ಕೋಶಾಧಿಕಾರಿ ರಾಜ ಮೆಸ್ಕಾಂ ವಂದಿಸಿದರು.