ಸಾರಾಂಶ
ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ರಸ್ತೆ, ಚರಂಡಿ ಕಾಮಗಾರಿಗಳು ಶುರುವಾಗಲಿವೆ. ನಿಮ್ಮೆಲ್ಲಾ ಸಮಸ್ಯೆಗಳು ಹಂತ ಹಂತವಾಗಿ ಪರಿಹಾರ ಕಾಣಲಿವೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗಲಿವೆ.
ಹಿರಿಯೂರು: ತಾಲೂಕಿನ ಐಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಟ್ಟಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಸಂಚರಿಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರ ಹೆಚ್ಚಿನ ದೂರುಗಳನ್ನು ಆಲಿಸಿದ ಸಚಿವರು ಮಾತನಾಡಿ, ಈ ಭಾಗದಲ್ಲಿ ಫ್ಲೋರೈಡ್ ಯುಕ್ತ ಕುಡಿಯುವ ನೀರಿನ ಪ್ರಮಾಣ ಜಾಸ್ತಿಯಿದ್ದು ಆದಷ್ಟು ಬೇಗ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು.
ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ರಸ್ತೆ, ಚರಂಡಿ ಕಾಮಗಾರಿಗಳು ಶುರುವಾಗಲಿವೆ. ನಿಮ್ಮೆಲ್ಲಾ ಸಮಸ್ಯೆಗಳು ಹಂತ ಹಂತವಾಗಿ ಪರಿಹಾರ ಕಾಣಲಿವೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗಲಿವೆ ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೂರ್ಖಣಪ್ಪ, ಉಪಾಧ್ಯಕ್ಷೆ ವೀಣಾ, ಮುಖಂಡರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ,ಕಲ್ಲಟ್ಟಿ ಹರೀಶ್, ಕಂದಿಕೆರೆ ಸುರೇಶ್ ಬಾಬು, ಗಿಡ್ಡೋಬನಹಳ್ಳಿ ಅಶೋಕ್, ಕಲ್ಲಟ್ಟಿ ತಿಪ್ಪೇಸ್ವಾಮಿ, ಕಣುಮಪ್ಪ,ಕಣುಮೇಶ್ ಮುಂತಾದವರು ಹಾಜರಿದ್ದರು.