ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪೂರ್ವಿಕ ಅವರು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯ ಹಾಗೂ ಸಂತೋಷದ ವಿಷಯವಾಗಿದೆ. ಇಂತಹ ಸಾಧನೆಗಳು ಇತರ ಹೆಣ್ಣುಮಕ್ಕಳಿಗೂ ಸ್ಫೂರ್ತಿಯಾಗಲಿ. ಕ್ರೀಡಾಪಟುಗಳು ಇನ್ನಷ್ಟು ಧೈರ್ಯ, ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದ ತರಬೇತಿ ಪಡೆದು ಉನ್ನತ ಸಾಧನೆ ಮಾಡಬೇಕು ಎಂದು ಹಾರೈಸಿದರು.
ಕನ್ನಡಪ್ರಭ ವಾರ್ತೆ ರಾಮನಗರ
ಮೈಸೂರಿನ ಯುವರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2026ರ ಟೇಕ್ವಾಂಡೋ ಚಾಂಪಿಯನ್ ಶಿಪ್ನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಟೇಕ್ವಾಂಡೋ ಸಂಸ್ಥೆ ಕ್ರೀಡಾಪಟು ಎಂ.ಪೂರ್ವಿಕಾ 50 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿ ಚಿನ್ನದ ಪದಕ ಗೆದ್ದಿದ್ದಾರೆ.ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಬೆಂಗಳೂರಿನ ತಮ್ಮ ನಿವಾಸದ ಕಚೇರಿಯಲ್ಲಿ ಕ್ರೀಡಾಪಟು ಎಂ.ಪೂರ್ವಿಕಾ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪೂರ್ವಿಕ ಅವರು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯ ಹಾಗೂ ಸಂತೋಷದ ವಿಷಯವಾಗಿದೆ. ಇಂತಹ ಸಾಧನೆಗಳು ಇತರ ಹೆಣ್ಣುಮಕ್ಕಳಿಗೂ ಸ್ಫೂರ್ತಿಯಾಗಲಿ. ಕ್ರೀಡಾಪಟುಗಳು ಇನ್ನಷ್ಟು ಧೈರ್ಯ, ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದ ತರಬೇತಿ ಪಡೆದು ಉನ್ನತ ಸಾಧನೆ ಮಾಡಬೇಕು ಎಂದು ಹಾರೈಸಿದರು.2026ರ ಅಕ್ಟೋಬರ್ 20ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಎಸ್ಜಿಎಫ್ಐ ರಾಷ್ಟ್ರಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಪೂರ್ವಿಕ ಅವರು ಭಾಗವಹಿಸಲಿದ್ದು, ಅಲ್ಲಿ ಉತ್ತಮ ಪ್ರದರ್ಶನ ನೀಡಿ ಜಯಶಾಲಿಯಾಗಲಿ ಎಂದು ಸಚಿವ ಬಾಲಕೃಷ್ಣ ಶುಭ ಹಾರೈಸಿದರು.
ಇದೇ ವೇಳೆ ಜಿಲ್ಲಾ ಟೇಕ್ವಾಂಡೋ ಸಂಸ್ಥೆ ಅಧ್ಯಕ್ಷರಾದ ಕೃಷ್ಣಮೂರ್ತಿ, ಸಂಸ್ಥೆ ಕಾರ್ಯದರ್ಶಿ ಮತ್ತು ತರಬೇತಿದಾರರಾದ ಗೋವಿಂದ ಅವರನ್ನು ಸಚಿವರು ಅಭಿನಂದಿಸಿದರು.