ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವ: ಎಸ್‌ಪಿ ನೇತೃತ್ವದಲ್ಲಿ ಮ್ಯಾರಥಾನ್

| Published : Mar 11 2024, 01:17 AM IST

ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವ: ಎಸ್‌ಪಿ ನೇತೃತ್ವದಲ್ಲಿ ಮ್ಯಾರಥಾನ್
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ-2024ರ ಅಂಗವಾಗಿ ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿಗಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಶಿವಮೊಗ್ಗ ನಗರದಲ್ಲಿ ಮ್ಯಾರಥಾನ್ ಓಟ ನಡೆಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ-2024ರ ಅಂಗವಾಗಿ ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿಗಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಶಿವಮೊಗ್ಗ ನಗರದಲ್ಲಿ ಮ್ಯಾರಥಾನ್ ಓಟ ನಡೆಯಿತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು.

ಮ್ಯಾರಥಾನ್ ಓಟವನ್ನು ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭಿಸಿ, ಅಶೋಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಕರ್ನಾಟಕ ಸಂಘ ವೃತ್ತ, ಡಿವಿಎಸ್ ವೃತ್ತ, ಮಹಾವೀರ ವೃತ್ತ, ಶಿವಮೂರ್ತಿ ವೃತ್ತ, ಜೈಲ್ ವೃತ್ತ, ಐಬಿ ವೃತ್ತದ ಮುಖಾಂತರ ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಮುಕ್ತಾಯಗೊಂಡಿತು.

ಮ್ಯಾರಥಾನ್‌ನಲ್ಲಿ ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್‌, ಎಎಸ್‌ಪಿ ಅನಿಲ್‌ಕುಮಾರ್ ಭೂಮರಡ್ಡಿ, ಪೊಲೀಸ್ ಉಪಾಧೀಕ್ಷಕರಾದ ಬಾಬು ಆಂಜನಪ್ಪ, ಎಂ.ಸುರೇಶ್‌, ನಾಗರಾಜ್‌, ಗೋಪಾಲಕೃಷ್ಣ ಟಿ. ನಾಯಕ್, ಕೆ.ಇ.ಕೇಶವ್, ಗಜಾನನ ವಾಮನ ಸುತಾರ, ಪ್ರಕಾಶ್, ಮಂಜುನಾಥ ಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿ ದರ್ಶನ್ ಲಕ್ಕನವರ್, ದ್ವಿತೀಯ ಸ್ಥಾನವನ್ನು ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿ ನಾಗರಾಜ್ ದಿವಾತೆ, ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿನಿ ಎಚ್.ವಿ. ದೀಕ್ಷಾ ಮತ್ತು ದ್ವಿತೀಯ ಸ್ಥಾನವನ್ನು ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿನಿ ಎಸ್‌.ಸಾನಿಕ ಪಡೆದಿದರು.

ಪೊಲೀಸ್ ಅಧೀಕ್ಷಕರು ಪ್ರಥಮ ಸ್ಥಾನ ಪಡೆದ ವಿಜೇತರಿಗೆ ₹10,000 ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿ ಪತ್ರವನ್ನು ಹಾಗೂ ದ್ವಿತೀಯ ಸ್ಥಾನ ಪಡೆದ ವಿಜೇತರಿಗೆ ₹5,000 ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿ ಪತ್ರವನ್ನು ವಿತರಿಸಿದರು. ಮ್ಯಾರಥಾನ್ ನಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ನೀಡಲಾಯಿತು.

- - - -10ಎಸ್‌ಎಂಜಿಕೆಪಿ05:

ಶಿವಮೊಗ್ಗದ ನಗರದಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ-2024ರ ಅಂಗವಾಗಿ ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿಗಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಆಯೋಜಿಸಿದ್ದ ಮ್ಯಾರಥಾನ್ ಓಟದಲ್ಲಿ ಜಿಲ್ಲಾ ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್‌, ಎಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ ಮತ್ತಿತರರು ಭಾಗಿಯಾಗಿದ್ದರು.