ಶಾಲೆಗಳಲ್ಲಿ ಸುವರ್ಣ ಕರ್ನಾಟಕ ವರ್ಷಾಚರಣೆ: ಸಿಹಿ ವಿತರಣೆಗೆ ಚಾಲನೆ

| Published : Nov 11 2024, 12:50 AM IST

ಶಾಲೆಗಳಲ್ಲಿ ಸುವರ್ಣ ಕರ್ನಾಟಕ ವರ್ಷಾಚರಣೆ: ಸಿಹಿ ವಿತರಣೆಗೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಶಾಸಕ ಎ.ಎಸ್‌. ಪೊನ್ನಣ್ಣ ಅವರ ಪತ್ನಿ ಕಾಂಚನ್‌ ಪೊನ್ನಣ್ಣ ಅವರು ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುವರ್ಣ ಕರ್ನಾಟಕ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು.

ಕನ್ನಡಪ್ರಭವಾರ್ತೆ ವಿರಾಜಪೇಟೆ

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷಗಳು ಸಂದಿರುವ ಹಿನ್ನಲೆಯಲ್ಲಿ ಶಾಲೆಗಳಲ್ಲಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ ಪತ್ನಿ ಕಾಂಚನ್ ಪೊನ್ನಣ್ಣ ಅವರು ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸುವರ್ಣ ಕರ್ನಾಟಕ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಒಂದು ವರ್ಷಗಳ ಕಾಲ ಆಚರಣೆ ಮಾಡುವಂತೆ ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರ ಅನುಪಸ್ಥಿತಿಯಲ್ಲಿ ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ ಅವರು ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಚಿಕ್ಕಪೇಟೆ ಸುವರ್ಣ ಕರ್ನಾಟಕ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು. ಬಳಿಕ ಮಾತನಾಡಿ ಕನ್ನಡ ನಾಡು ನುಡಿ ಜಲ ಸಂರಕ್ಷರಣೆ ನಮ್ಮೆಲ್ಲರ ಕರ್ತವ್ಯವಾಗಬೇಕು. ರಾಜರ ಆಳ್ವಿಕೆಯಿಂದ ಕೊನೆಯಾಗಿ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಸಂದಿವೆ. ಕರ್ನಾಟಕ ರಾಜ್ಯವು ಮನೆಯಂತಾದರೆ ಕನ್ನಡ ಭಾಷೆ ಮನಸ್ಸಿನಂತಾಗಬೇಕು. ಮಾತೃ ಭಾಷೆಗೆ ಮಹತ್ವ ನೀಡಿ ಪರಭಾಷೆಯನ್ನು ಗೌರವಿಸುವಂತಹ ಗುಣಗಳ ನಮ್ಮದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಈ ನಿಟ್ಟಿನಲ್ಲಿ ಸರ್ಕಾರವು ಹಮ್ಮಿಕೊಂಡಿರುವ ಸುವರ್ಣ ಕರ್ನಾಟಕದ ಕಾರ್ಯಕ್ರಮಗಳ ಯಶಸ್ವಿ ಕಾಣಬೇಕು. ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಮಾಡಲಾಗುತ್ತದೆ ಎಂದು ಈ ಸಂದರ್ಭ ಹೇಳಿದರು.

ಸಿಹಿ ವಿತರಣಾ ಕಾರ್ಯಕ್ರಮದ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪಕ್ಷದ ಪ್ರಮುಖರಾದ ಜೋಕಿಂ ರೋಡ್ರಿಗ್ರಸ್, ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಸಯೈದ್ ಶಭೀರ್, ಶಾಲೆಯ ಮುಖ್ಯ ಶಿಕ್ಷಕಿ ಅನ್ನಮ್ಮ ಪಿ.ಡಿ. ಸಹಶಿಕ್ಷಕರು, ಹಾಜರಿದ್ದರು.