ಗುರುಕುಲದಲ್ಲಿ ಗೋಲ್ಡನ್‌ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಅಂತ್ಯ

| Published : Jan 29 2024, 01:33 AM IST

ಗುರುಕುಲದಲ್ಲಿ ಗೋಲ್ಡನ್‌ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಅಂತ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವ ಗುರುಕುಲದಲ್ಲಿ ನಡೆದ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಕೊಠಡಿಗೆ ಮಹಾಲಿಂಗ ಸ್ವಾಮೀಜಿ ಭೇಟಿ ನೀಡಿ ಮಕ್ಕಳಿಗೆ ಶುಭ ಕೋರಿದರು. ಮೋಹನ ರೆಡ್ಡಿ, ಬಸವರಾಜ ಮೊಳಕೀರೆ, ಸಿದ್ರಾಮ ಗೊಗ್ಗಾ, ಧನರಾಜ ಬಂಬುಳಗೆ ಇದ್ದರು.

ಕನ್ನಡಪ್ರಭ ವಾರ್ತೆ ಭಾಲ್ಕಿ

ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜಿನಲ್ಲಿ ಶನಿವಾರ ಮತ್ತು ಭಾನುವಾರ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆಗಳು ಜರುಗಿದವು.

ರಾಜ್ಯ ಸೇರಿ ನೆರೆಯ ರಾಜ್ಯಗಳ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ಕಳೆದ ಆರು ವರ್ಷಗಳಿಂದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನಡಿ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಏರ್ಪಡಿಸಿ ಉಚಿತವಾಗಿ ಪಿಯು ಶಿಕ್ಷಣ ನೀಡಲಾಗುತ್ತಿದೆ.

2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೂ ಈ ಯೋಜನೆ ಮುಂದುವರಿಸಲಾಗಿದ್ದು, ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆಗಾಗಿ ಇದುವರೆಗೂ 8724 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ.

ಒಟ್ಟು ಮೂರು ಹಂತದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಜ.21ರಂದು ನಡೆದ ಮೊದಲ ಹಂತದ ಪರೀಕ್ಷೆಯಲ್ಲಿ 2103 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶನಿವಾರ ನಡೆದ ಎರಡನೇ ಹಂತದ ಪರೀಕ್ಷೆಗೆ 2203 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಭಾನುವಾರ ಮೂರನೇ ಮತ್ತು ಕೊನೆಯ ಹಂತದ ಪರೀಕ್ಷೆ ನಡೆಯಲಿದ್ದು, 3200 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು.