ಗೋಣಿಕೊಪ್ಪ: ಮನೆ ಮನೆಗೆ ಪೊಲೀಸ್‌ ಅಭಿಯಾನ

| Published : Jul 18 2025, 12:45 AM IST

ಸಾರಾಂಶ

ಸಾರ್ವಜನಿಕ ಸಮಸ್ಯೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವಂಥ ವಿನೂತನ ಪರಿಕಲ್ಪನೆ ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂಥ ವಿನೂತನ ಪರಿಕಲ್ಪನೆ ‘ಮನೆ ಮನೆಗೆ ಪೊಲೀಸ್‌’ ಕಾರ್ಯಕ್ರಮಕ್ಕೆ ಭಾನುವಾರ ಗೋಣಿಕೊಪ್ಪ ನಗರದಲ್ಲಿ ಚಾಲನೆ ನೀಡಲಾಯಿತು.

ಗೋಣಿಕೊಪ್ಪ ಠಾಣಾಧಿಕಾರಿ ಪ್ರದೀಪ್ ಕುಮಾರ್ ಬಿ.ಕೆ. ಮತ್ತು ಸಿಬ್ಬಂದಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಿಭಾಗದ ಉಮಾಮಹೇಶ್ವರಿ ಬಡಾವಣೆಗೆ ತೆರಳಿ ಪೊಲೀಸರ ಜನಸ್ನೇಹಿ ಕಾರ್ಯಕ್ರಮವಾಗಿರುವ ಮನೆಬಾಗಿಲಿಗೆ ಪೊಲೀಸರು ಈ ವಿಚಾರವಾಗಿ ಜನರಲ್ಲಿ ಜಾಗೃತಿ ಮೂಡಿಸಿದರು.

ಮನೆ ಮನೆಗೆ ಪೊಲೀಸ್ ಎಂಬ ರಾಜ್ಯ ಸರ್ಕಾರದ ವಿನೂತನ ಪರಿಕಲ್ಪನೆಯ ಕಾರ್ಯಕ್ರಮ ಇದಾಗಿದೆ. ಪೊಲೀಸರಿಂದ ಹೆಚ್ಚಿನ ಸೇವೆ ಈ ಮೂಲಕ ಜನರೆಡೆಗೆ ತಲುಪಲಿದೆ ಎಂದು ಹೇಳಿದರು.

ಕಾರ್ಯಕ್ರಮದ ಭಾಗವಾಗಿ ಪೊಲೀಸ್ ಸಿಬ್ಬಂದಿ, ಎಂಟು ವಾರ್ಡ್‌ಗಳಲ್ಲಿ ಅಭಿಯಾನ ಕೈಗೊಂಡು, ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು.

ಮನೆಯಲ್ಲಿರುವವರ ಹೆಸರು, ಮೊಬೈಲ್ ನಂಬರ್ ಪಡೆದುಕೊಳ್ಳಲಾಯಿತು.

ಗೋಣಿಕೊಪ್ಪ ಠಾಣಾಧಿಕಾರಿ ಪ್ರದೀಪ್ ಕುಮಾರ್, ಪ್ರೊಫೆಷನರಿ ಪಿಎಸ್ಐಸಿ, ಕಾಳಿಂಗಪ್ಪ, ಎಎಸ್ಐ ಗಳಾದ ಶ್ರೀನಿವಾಸ್, ವೆಂಕಟೇಶ್ ಹಾಗೂ ಪೊಲೀಸ್ ಸಿಬ್ಬಂದಿ ಅಭಿಯಾನ ಮುನ್ನಡೆಸಿದರು.