ಗೋಣಿಕೊಪ್ಪ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿರುವ ಟಾಸ್ ಕಟ್ಟಡದಲ್ಲಿ ಬಿಜೆಪಿ ವಿರಾಜಪೇಟೆ ಮಂಡಲ ಕಚೇರಿಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಲೋಕಾರ್ಪಣೆಗೊಳಿಸಿದರು.
ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ
ಗೋಣಿಕೊಪ್ಪ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿರುವ ಟಾಸ್ ಕಟ್ಟಡದಲ್ಲಿ ಬಿಜೆಪಿ ವಿರಾಜಪೇಟೆ ಮಂಡಲ ಕಚೇರಿಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಲೋಕಾರ್ಪಣೆಗೊಳಿಸಿದರು.ಈ ಸಂದರ್ಭ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಪಕ್ಷದ ಕಚೇರಿ ಉದ್ಘಾಟನೆಯೊಂದಿಗೆ ಪಕ್ಷದ ಬೆಳವಣಿಗೆಯ ಭಾವನೆ ಹೆಚ್ಚಾಗಬೇಕು. ಕೊಡಗು ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆ ದೃಷ್ಟಿಯಿಂದ ಹೆಚ್ಚು ಕಾರ್ಯಾಲಯಗಳ ಅವಶ್ಯಕತೆ ಇದೆ. ಮುಂಬರುವ ಚುನಾವಣೆಗಳನ್ನು ಎದುರಿಸಲು ಹಾಗೂ ಕಾರ್ಯತಂತ್ರಗಳನ್ನು ರೂಪಿಸಲು ಕಾರ್ಯಲಯಗಳು ಶಕ್ತಿ ತುಂಬಲಿವೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಎಂಎಲ್ಸಿ ಮಂಡೇಪಂಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಜಿಲ್ಲಾ ಉಪಾಧ್ಯಕ್ಷರಾದ ಅರುಣ್ ಭೀಮಯ್ಯ, ಗುಮ್ಮಟ್ಟೀರ ಕಿಲನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲೀರ ಚಲನ್ ಕುಮಾರ್ ಇದ್ದರು.