ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಬಹುಭಾಷಾ ಕವಿಗೋಷ್ಠಿ ಅ.11ರಂದು ಬೆಳಗ್ಗೆ 10ಕ್ಕೆ ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಕಲಾ ವೇದಿಕೆಯಲ್ಲಿ ನಡೆಯಲಿದೆ.ಗೋಣಿಕೊಪ್ಪ ಬಹುಭಾಷಾ ಕವಿಗೋಷ್ಠಿ ಆಯೋಜನ ಸಮಿತಿ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಯಿತು.
ಸಂಚಾಲಕರಾಗಿ ಎಸ್.ಎಂ ರಜನಿ, ಕಾರ್ಯದರ್ಶಿಯಾಗಿ ಶೀಲಾ ಬೋಪಣ್ಣ, ಸಹಕಾರ್ಯದರ್ಶಿಯಾಗಿ ಟಿ.ಆರ್. ವಿನೋದ್, ನಿರ್ದೇಶಕರಾಗಿ ಚಂದನಾ ಮಂಜುನಾಥ್, ಓಮನ, ಉಳುವಂಗಡ ಕಾವೇರಿ, ಶ್ರೀ ಕಾವೇರಿ ಸಮಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಸಂಯೋಜಕ ಎಂ.ಕೆ.ಚಂದನ್ ಕಾಮತ್, ಪ್ರಧಾನ ಕಾರ್ಯದರ್ಶಿ ಕಂದಾ ದೇವಯ್ಯ ಮತ್ತು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ಅವರನ್ನು ಆರಿಸಲಾಯಿತು.ಕವನ ವಾಚನ ಆಸಕ್ತರಾಗಿರುವ ಕೊಡಗು ಜಿಲ್ಲೆಯ ಕವಿ/ ಕವಿಯಿತ್ರಿಯರಿಂದ ಸ್ವರಚಿತ ಕವನ ಆಹ್ವಾನಿಸಲಾಗಿದೆ. ಆಸಕ್ತರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ಸೆ.28ರೊಳಗೆ ಕಳುಹಿಸಬೇಕು.
ಈ ಬಾರಿಯ ಕವಿಗೋಷ್ಠಿಯಲ್ಲಿ ಪ್ರತಿವರ್ಷದಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲೆಯಾಳಂ, ತೆಲುಗು, ಮರಾಠಿ, ಸಂಸ್ಕೃತ ಹೀಗೆ ಯಾವುದೇ ಭಾಷೆಯ ಕವನಗಳನ್ನು ಕನ್ನಡ ಲಿಪಿಯಲ್ಲಿ ಹಾಗೂ ಹಿಂದಿ ಇಂಗ್ಲಿಷ್ ಕವನವನ್ನು ಅದೇ ಭಾಷೆಯಲ್ಲಿ ಕಳುಹಿಸಬೇಕು.ಕನ್ನಡ ಭಾಷೆಯ ಚುಟುಕು ಕವನ (4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು. ಈ ಬಾರಿ ವಿಶೇಷವಾಗಿ ಮಕ್ಕಳ ಕವನ (6 ರಿಂದ 13 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ.
ಆಸಕ್ತರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರ ಕಳುಹಿಸಿಕೊಡಬೇಕು. ಮಾಹಿತಿಗಳಿಲ್ಲದ ಕವನಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಕವನಗಳನ್ನು ಮತ್ತು ಮಾಹಿತಿಯನ್ನು ಈ ಕೆಳಗೆ ಸೂಚಿಸಿದ ವ್ಯಾಟ್ಸಾಪ್- ಇ.ಮೇಲ್ ಮೂಲಕ ಕಳುಹಿಸಬಹುದು. ಕವನಗಳನ್ನು ಟೈಪ್ ಮಾಡಿ ಕಳುಹಿಸಬೇಕು. ವಾಟ್ಸಾಪ್ ಅಥವಾ ಇಮೇಲ್ ನಲ್ಲಿ ಕವನದ ಛಾಯ ಪ್ರತಿ ಕಳುಹಿಸಿದರೆ ಅದನ್ನು ಪರಿಗಣಿಸಲಾಗುವುದಿಲ್ಲ.ವಾಟ್ಸಾಪ್ ಅಥವಾ ಇಮೇಲ್ ಸೌಲಭ್ಯ ಇಲ್ಲದಿರುವವರು ಅಂಚೆ ಮೂಲಕ ಈ ವಿಳಾಸಕ್ಕೆ ಅಗತ್ಯ ಮಾಹಿತಿಯೊಂದಿಗೆ ಕಳುಹಿಸಿಕೊಡಬಹುದು.
ವಿಳಾಸ : ಅಧ್ಯಕ್ಷರು, ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ, ಕೇರಾಫ್ ಕಾಮತ್ ನವಮಿ, ಗೋಣಿಕೊಪ್ಪ. ಪಿನ್-571213ಕವನಗಳನ್ನು ಅಂಚೆ ಮೂಲಕ ಕಳುಹಿಸುವವರು ಲಕೋಟೆಯ ಮೇಲೆ ದೊಡ್ಡದಾಗಿ ‘ ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ ಕವನ’ ಎಂದು ನಮೂದಿಸಬೇಕು.
ನಿಬಂಧನೆಗಳು: ಯಾವುದೇ ಭಾಷೆಯಲ್ಲಿ ಸ್ವರಚಿತ, ಸಾಮಾಜಿಕ ಜಾಲ ತಾಣ ಸೇರಿದಂತೆ ಎಲ್ಲಿಯೂ ಪ್ರಕಟವಾಗದ ಕವನಗಳನ್ನು ಮಾತ್ರ ಕಳುಹಿಸಬೇಕು. ಕವನಗಳು ಗರಿಷ್ಠ 16 ಸಾಲುಗಳನ್ನು ಮೀರಬಾರದು. ಯಾವುದೇ ಭಾಷೆಯ ಒಂದು ಕವನವನ್ನು ಮಾತ್ರ ಆಯ್ಕೆಗೆ ಕಳುಹಿಸಬೇಕು. ಎರಡೆರಡು ಭಾಷೆಗಳಲ್ಲಿ ಒಬ್ಬರೆ ಕವನಗಳನ್ನು ಕಳುಹಿಸಿದಲ್ಲಿ ಅವರ ಎಲ್ಲಾ ಕವನಗಳನ್ನು ತಿರಸ್ಕರಿಸಲಾಗುತ್ತದೆ.ಆಯ್ಕೆಯಾದ ಕವನಗಳ ವಾಚನಕ್ಕೆ ಬಹುಭಾಷಾ ಕವಿಗೋಷ್ಠಿಯಂದು ಅವಕಾಶ ಒದಗಿಸಲಾಗುತ್ತದೆ. ಗೋಷ್ಠಿಯಲ್ಲಿ ಕವಿಗಳು ಕಡ್ಡಾಯವಾಗಿ ಆಯ್ಕೆಯಾದ ಕವನವನ್ನಷ್ಟೆ ವಾಚಿಸಬೇಕು. ಕವನಗಳನ್ನು ಹಾಡುವಂತಿಲ್ಲ ಮತ್ತು ಯಾವುದೇ ಪೀಠಿಕೆಗಳಿಗೆ ಅವಕಾಶವಿಲ್ಲ. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಮಿತಿ ಸಂಚಾಲಕಿ ಎಸ್.ಎಂ ರಜನಿ -94838 26120, ಕಾರ್ಯದರ್ಶಿ ಶೀಲಾ ಬೋಪಣ್ಣ- 9945794414, ಸದಸ್ಯೆ ಚಂದನಾ ಮಂಜುನಾಥ್ - 9986939357ಅವರನ್ನು ಸಂಪರ್ಕಿಸಬಹುದು.
ಇ-ಮೇಲ್ gonikoppaldasara@gmail.com