ಗೋಣಿಕೊಪ್ಪ- ಪಾಲಿಬೆಟ್ಟ ರಸ್ತೆ ಕಾಮಗಾರಿಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ವೀಕ್ಷಿಸಿ, ಪರಿಶೀಲಿಸಿದರು.
ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ
ಗೋಣಿಕೊಪ್ಪ- ಪಾಲಿಬೆಟ್ಟ ರಸ್ತೆ ಕಾಮಗಾರಿಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ವೀಕ್ಷಿಸಿ, ಪರಿಶೀಲಿಸಿದರು.ಮಳೆಗಾಲದಲ್ಲಿ ತೀವ್ರ ಹದಗೆಟ್ಟಿದ್ದ ಈ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಅನುದಾನ ಒದಗಿಸಿದ್ದರು. ಇಂದು ಈ ಮಾರ್ಗವಾಗಿ ಶಾಸಕರ ಪೂರ್ವಾ ನಿಗದಿತ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ, ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ತಮ್ಮ ವಾಹನವನ್ನು ನಿಲ್ಲಿಸಿ, ಇಲ್ಲೇ ಕೈಗೊಂಡ ಕಲ್ವರ್ಟ್ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಹಾಗೂ ಗುಣಮಟ್ಟವನ್ನು ಪರೀಕ್ಷಿಸಿದರು. ಭರದಿಂದ ಸಾಗುತ್ತಿರುವ ಈ ಕಾಮಗಾರಿಗೆ ಮತ್ತಷ್ಟು ವೇಗ ನೀಡಿ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಅನುಕೂಲಕ್ಕೆ ಈ ರಸ್ತೆ ಒದಗುವಂತೆ ಮಾಡಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ ಅವರು ಉಪಸ್ಥಿತರಿದ್ದರು.