ಶಿಕ್ಷಕರ ದಿನಾಚರಣೆ ಅಂಗವಾಗಿ ಗೋಣಿಕೊಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ವತಿಯಿಂದ ಶಾಲೆಯ ಶಿಕ್ಷಕರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ

ಶಿಕ್ಷಕರ ದಿನಾಚರಣೆ ಅಂಗವಾಗಿ ಗೋಣಿಕೊಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ವತಿಯಿಂದ ಶಾಲೆಯ ಶಿಕ್ಷಕರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್‌ ಜೋಡುಬೀಟಿ ಅಧ್ಯಕ್ಷತೆಯಲ್ಲಿ ಡಮರುಗ ಬಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಶಿಕ್ಷಕ ಹೆಚ್.ಕೆ. ಕುಮಾರ್ ಸೇರಿದಂತೆ ಶಿಕ್ಷಕರಾದ ಜೋಸ್ಲಿಯ, ಇಂದಿರಾ, ದಮಯಂತಿ, ಅನಿತಾಕುಮಾರಿ, ಯಸ್ವಿನಿ, ಅರ್ಷಿಯ, ಕ್ಲೆಮೆಂಟಿನ್, ಸಹನಾ, ಶಾರದಾ, ನಾಗರಾಜು, ಸ್ನೇಹಕಾವೇರಮ್ಮ, ಮಂಜುಳಾ, ಸಿದ್ದರಾಜು, ಪೂಜಾ, ಅರ್ಷಿಯ, ಪಾರ್ವತಿ ಅವರನ್ನು ಸನ್ಮಾನಿಸಲಾಯಿತು.ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್‌ ಜೋಡುಬೀಟಿ, ಶಿಕ್ಷಕರು ಮನುಷ್ಯರನ್ನು ರೂಪಿಸುವ ಮೌನ ಶಿಲ್ಪಿಗಳು ಎಂದರು.ಶಿಕ್ಷಕರಿಗಾಗಿ ವಿವಿಧ ಮನರಂಜನಾ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ವಿಶೇಷ ಭೋಜನ ಕೂಟ ಏರ್ಪಡಿಸಲಾಗಿತ್ತು. ಎಸ್‌ಡಿಎಂಸಿ ಉಪಾಧ್ಯಕ್ಷೆ ದಿವ್ಯ ಪ್ರಾರ್ಥನೆ ನೆರವೇರಿಸಿದರು. ಸದಸ್ಯೆಗೌರಿ ಸ್ವಾಗತಿಸಿದರು. ಸೌಮ್ಯ ವಂದಿಸಿದರು. ಚಂದ್ರಕಲಾಕೆ ಜಿ. ನಿರೂಪಿಸಿದರು. ಎಸ್‌ಡಿಎಂಸಿ ಸದಸ್ಯರಾದ ಅನಿತಾ, ಕೌಶರ್, ಮಂಜುಳ, ಮೀನ, ರಾಕೇಶ್ ಮತ್ತಿತರರಿದ್ದರು.