ಬೆಳೆಗಾರರು-ಕಾರ್ಮಿಕರ ಉತ್ತಮ ಬಾಂಧವ್ಯ: ಅಂಬಿ ಕಾರ್ಯಪ್ಪ

| Published : Oct 17 2024, 12:04 AM IST

ಸಾರಾಂಶ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಪೋಕ್ಲು ಸುಭಾಷ್ ನಗರ ಕಾರ್ಯಕ್ಷೇತ್ರದ ಪರಮೇಶ್ವರಿ ಜ್ಞಾನವಿಕಾಸ ಮಾಸಿಕ ಸಭೆ ಬುಧವಾರ ನೆರವೇರಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲುಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ಬೆಳೆಗಾರರು ಮತ್ತು ಕಾರ್ಮಿಕರ ನಡುವಿನ ಭಾಂಧವ್ಯ ಉತ್ತಮವಾಗಿದೆ ಎಂದು ನಾಪೋಕ್ಲು ಕೃಷಿ ಉತ್ಪನ್ನ ಮಾರುಕಟ್ಟೆ ಮಾಜಿ ಅಧ್ಯಕ್ಷ ಹಾಗೂ ವ್ಯವಸಾಯ ಬ್ಯಾಂಕಿನ ನಿರ್ದೇಶಕ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಹೇಳಿದ್ದಾರೆ.

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಇಲ್ಲಿನ ಸುಭಾಷ್ ನಗರ ಕಾರ್ಯಕ್ಷೇತ್ರದ ಪರಮೇಶ್ವರಿ ಜ್ಞಾನವಿಕಾಸ ಮಾಸಿಕ ಸಭೆಯಲ್ಲಿ ಬುಧವಾರ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೃಷಿಯಿಂದಾಗಿ ಬೆಳೆಗಾರರು ಮತ್ತು ಕಾರ್ಮಿಕರು ಉತ್ತಮವಾಗಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಸದಸ್ಯರಿಗೆ ಕೃಷಿ ಉತ್ಪನ್ನಗಳ ಬಗ್ಗೆ ಉತ್ತಮವಾದ ಮಾಹಿತಿ ನೀಡಿ ಮದ್ಯವರ್ಜನಾ ಶಿಬಿರದಿಂದ ಕಾರ್ಮಿಕರು ಕುಡಿತವನ್ನು ತ್ಯಜಿಸಿದ್ದಾರೆ ಎಂದರು.ಸಂಘದ ಅಧ್ಯಕ್ಷ ಸಾಜಿದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಸಮನ್ವಯಾಧಿಕಾರಿ ಮಾಲಿನಿ ಸದಸ್ಯರಿಗೆ ಸಂಘದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಸೇವಾಪ್ರತಿನಿಧಿ ಉಮಾಲಕ್ಷ್ಮಿ, ಸಂಘಗಳ ಸದಸ್ಯರು ಇದ್ದರು.

ಸಂಚಾರಿ, ವಲಸೆ ಕುರಿಗಾಹಿಗಳಿಗೆ ಗುರುತು ಚೀಟಿ ವಿತರಣೆ:

ಮಡಿಕೇರಿ : ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಘೋಷಣೆಯಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಸಹಯೋಗದಲ್ಲಿ ಸಂಚಾರಿ/ ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸುವ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಕನಿಷ್ಠ 20 ಕುರಿ ಹೊಂದಿದ್ದು, ಸಂಚಾರಿ/ವಲಸೆ ಹೋಗುವ ಕುರಿಗಾಹಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಂಚಾರಿ ವಲಸೆ ಕುರಿಗಾಹಿಗಳು ಗುರುತಿನ ಚೀಟಿ ಪಡೆಯಲು ತಮ್ಮ ವ್ಯಾಪ್ತಿಯ ಸ್ಥಳೀಯ ಪಶುವೈದ್ಯಾಧಿಗಳ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಅರ್ಜಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅ.31 ರೊಳಗೆ ತಾಲೂಕಿನ ಸಹಾಯಕ ನಿರ್ದೇಶಕರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇವರಿಗೆ ಅರ್ಜಿ ಸಲ್ಲಿಸಬೇಕಿದೆ.

ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲೆ ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರು (ಆಡಳಿತ), ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಹಾಗೂ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿ., ಮೈಸೂರು ಅಥವಾ ದೂ.ಸಂ. 9845623137 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.