ಸಾರಾಂಶ
ತರಕಾರಿ ಮತ್ತು ಸೊಪ್ಪು ಬಳಕೆಯ ಜತೆಗೆ ವ್ಯಾಯಾಮ ಹಾಗೂ ಗುಣಮಟ್ಟದ ಅಹಾರ ಪದಾರ್ಥಗಳನ್ನು ಬಳಕೆ ಮಾಡುವುದನ್ನು ರೂಢಿಸಿಕೊಂಡಲ್ಲಿ ಸಾಂಕ್ರಾಮಿಕವಲ್ಲದ ರೋಗಗಳಿಂದ ರಕ್ಷಣೆ ಪಡೆಯಬಹುದು ಎಂದು ಎನ್‌ಸಿಡಿ ವಿಭಾಗದ ಆಪ್ತ ಸಮಾಲೋಚಕಿ ತಾರಾ ಸಲಹೆ ನೀಡಿದರು. ಗ್ರಾಮ ಆರೋಗ್ಯ ಯೋಜನೆಯಡಿ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎನ್‌ಸಿಡಿ ವಿಭಾಗದ ಆಪ್ತ ಸಮಾಲೋಚಕಿ । ಆರೋಗ್ಯ ತಪಾಸಣೆ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಹೊಳೆನರಸೀಪುರ
ಆಹಾರದಲ್ಲಿ ಹೆಚ್ಚಿನ ಪೌಷ್ಟಿಕಾಂಶಗಳಿಂದ ಕೂಡಿದ ತರಕಾರಿ ಮತ್ತು ಸೊಪ್ಪು ಬಳಕೆಯ ಜತೆಗೆ ವ್ಯಾಯಾಮ ಹಾಗೂ ಗುಣಮಟ್ಟದ ಅಹಾರ ಪದಾರ್ಥಗಳನ್ನು ಬಳಕೆ ಮಾಡುವುದನ್ನು ರೂಢಿಸಿಕೊಂಡಲ್ಲಿ ಸಾಂಕ್ರಾಮಿಕವಲ್ಲದ ರೋಗಗಳಿಂದ ರಕ್ಷಣೆ ಪಡೆಯಬಹುದು ಎಂದು ಎನ್‌ಸಿಡಿ ವಿಭಾಗದ ಆಪ್ತ ಸಮಾಲೋಚಕಿ ತಾರಾ ಸಲಹೆ ನೀಡಿದರು.ತಾಲೂಕಿನ ಹರಿಹರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆ ಮುಂಭಾಗದಲ್ಲಿ ದೊಡ್ಡಕುಂಚೆ ಸಮುದಾಯ ಆರೋಗ್ಯ ಕೇಂದ್ರದ ಸಹಕಾರದಲ್ಲಿ ಗ್ರಾಮ ಆರೋಗ್ಯ ಯೋಜನೆಯಡಿ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಂಕ್ರಮಿಕವಲ್ಲದ ರೋಗಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ, ರಕ್ತದೊತ್ತಡ ಹಾಗೂ ಇತರೆ ರೋಗಗಳು ಇದ್ದು, ಇವುಗಳ ಹತೋಟಿಯನ್ನು ಮನುಷ್ಯನ ಜೀವನ ಶೈಲಿ, ಅಹಾರ ಪದ್ಧತಿಯಿಂದ ಸುಧಾರಿಸಬಹುದಾಗಿದೆ ಎಂದು ತಿಳಿಸಿದರು.
ಸೊಳ್ಳೆಗಳ ಕಡಿತದಿಂದ ಹಲವಾರು ಮಾರಣಾಂತಿಕ ಕಾಯಿಲೆಗಳು ಮನುಷ್ಯರನ್ನು ಕಾಡುತ್ತಿದ್ದು, ಅವುಗಳಿಂದ ರಕ್ಷಣೆ ಪಡೆಯಲು ಸೊಳ್ಳೆಪರದೆ ಬಳಕೆ ಮಾಡಬೇಕು. ಬೇಡದ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.೬೫ ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡಲಾಯಿತು.
ಗ್ರಾಪಂ ಕಾರ್ಯದರ್ಶಿ ಜಗದೀಶ್, ಗ್ರಾಮ ಆರೋಗ್ಯ ತಾಲೂಕು ಸಂಯೋಜಕ ರಮೇಶ್ ಐ.ಕೆ., ಎನ್‌ಸಿಡಿ ವಿಭಾಗದ ಆಶಾ, ಬಿಲ್ ಕಲೆಕ್ಟರ್ ಮೇಘನಾ, ಆಶಾ ಕಾರ್ಯಕರ್ತೆ ಗೀತಾ, ಗ್ರಾಮದ ಮುಖಂಡರಾದ ಯೋಗರಾಜ್ ಇದ್ದರು.ಹೊಳೆನರಸೀಪುರ ತಾಲೂಕಿನ ಬೋರನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆ ಮುಂಭಾಗದಲ್ಲಿ ಗ್ರಾಮ ಆರೋಗ್ಯ ಯೋಜನೆಯಡಿ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ ಮಾಡಲಾಗಿತ್ತು.