ಸರ್ಕಾರವು ಪ್ರತಿಯೊಬ್ಬ ಮಕ್ಕಳು ಶಿಕ್ಷಣ ಪಡೆಯಲೇಬೇಕೆಂಬ ಮುಖ್ಯ ಉದ್ದೇಶ ಇರಿಸಿಕೊಂಡು ಮಕ್ಕಳ ಶಿಕ್ಷಣಕ್ಕಾಗಿ ಹತ್ತು ಹಲವು ಯೋಜನೆ ಜಾರಿಗೆ ತಂದಿದೆ.

ಕುಷ್ಟಗಿ: ಶೈಕ್ಷಣಿಕ ಭವಿಷ್ಯ ಉಜ್ವಲಗೊಳಿಸುವಲ್ಲಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದು ದೋಟಿಹಾಳ ಗ್ರಾಪಂ ಅಧ್ಯಕ್ಷ ಮಹೇಶ ಕಾಳಗಿ ಹೇಳಿದರು.

ತಾಲೂಕಿನ ದೋಟಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಶೂ ಮತ್ತು ಸಾಕ್ಸ್‌ ವಿತರಿಸಿ ಮಾತನಾಡಿದರು.

ಸರ್ಕಾರವು ಪ್ರತಿಯೊಬ್ಬ ಮಕ್ಕಳು ಶಿಕ್ಷಣ ಪಡೆಯಲೇಬೇಕೆಂಬ ಮುಖ್ಯ ಉದ್ದೇಶ ಇರಿಸಿಕೊಂಡು ಮಕ್ಕಳ ಶಿಕ್ಷಣಕ್ಕಾಗಿ ಹತ್ತು ಹಲವು ಯೋಜನೆ ಜಾರಿಗೆ ತಂದಿದೆ. ಅದನ್ನು ಪಡೆದುಕೊಂಡು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಉಪಪ್ರಾಚಾರ್ಯ ಡಿ.ಸುರೇಶ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳು ಇತರ ಶಾಲಾ ಮಕ್ಕಳಂತೆ ಕಲಿಯಲು ಪೂರಕವಾದ ಎಲ್ಲ ಸೌಲಭ್ಯ ಸರ್ಕಾರ ಕಲ್ಪಿಸಿದೆ. ಸರ್ಕಾರಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಸಮವಸ್ತ್ರ, ಶೂ, ಬಿಸಿಯೂಟ ಒಳಗೂಂಡಂತೆ ಎಲ್ಲ ಸೌಕರ್ಯ ಒದಗಿಸಲಾಗಿದ್ದು ಈ ಯೋಜನೆಯ ಪ್ರಯೋಜನ ಶಾಲಾ ಮಕ್ಕಳು ಪಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಪ್ರೌಢಶಾಲೆಯ ಶಿಕ್ಷಕರು,ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಇದ್ದರು.