ಸಾರಾಂಶ
ನಾವು ನಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಕಣ್ಣು ಸೇರಿದಂತೆ ಎಲ್ಲ ಅಂಗಾಗಳ ರಕ್ಷಣೆ, ಸೂಕ್ತ ನಿರ್ವಹಣೆಗೆ ನಾವು ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸಿದ್ದು, ಅರಿವು ಮೂಡಿಸುತ್ತಿದೆ
ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ಒಂದು ದೇಶ ಸುಭದ್ರವಾಗಿ ಅಭಿವೃದ್ದಿಯ ಹಾದಿಯಲ್ಲಿ ಸಾಗಬೇಕಾದರೆ ಉತ್ತಮ ಆಡಳಿತ ವ್ಯವಸ್ಥೆ ಇರಬೇಕು. ಜತೆಗೆ ದೇಶದ ಎಲ್ಲರೂ ದೈಹಿಕ ಹಾಗೂ ಮಾನಸಿಕವಾಗಿ ಉತ್ತಮ ಸ್ಥಿತಿಯಲ್ಲಿರಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.ತಾಲೂಕಿನ ಮೇಲೂರು ಗ್ರಾಮದಲ್ಲಿ ಶಾಸಕ ಗೃಹಕಚೇರಿಯಲ್ಲಿ ಹಮ್ಮಿಕೊಂಡಿದ್ದ ಆಶಾ ಕಿರಣ ಕಾರ್ಯಕ್ರಮದಡಿ ಕನ್ನಡಗಳನ್ನು ವಿತರಿಸಿ ಅವರು ಮಾತನಾಡಿದರು.ಆರೋಗ್ಯಕ್ಕೆ ಗಮನ ನೀಡಿನಾವು ನಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಕಣ್ಣು ಸೇರಿದಂತೆ ಎಲ್ಲ ಅಂಗಾಗಳ ರಕ್ಷಣೆ, ಸೂಕ್ತ ನಿರ್ವಹಣೆಗೆ ನಾವು ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸಿದ್ದು, ಅರಿವು ಮೂಡಿಸುತ್ತಿದೆ. ಈ ಯೋಜನೆಗಳನ್ನು ಬಳಸಿಕೊಂಡು ನಮ್ಮ ಆರೋಗ್ಯ ಮಟ್ಟವನ್ನು ಉತ್ತಮಪಡಿಸಿಕೊಳ್ಳಬೇಕೆಂದರು.
ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 2,300 ಮಂದಿಗೆ ಕನ್ನಡಕಗಳನ್ನು ಉಚಿತವಾಗಿ ಆಶಾಕಿರಣ ಯೋಜನೆಯಡಿ ವಿತರಿಸಲಾಯಿತು. ತಾಲ್ಲೂಕಿನ ಉಳಿದ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಇನ್ನುಳಿದ ಎಲ್ಲರಿಗೂ ಕನ್ನಡಗಳನ್ನು ವಿತರಿಸಲಾಗುವುದು ಎಂದು ವಿವರಿಸಿದರು.ವೈದ್ಯ ದಿನಾಚರಣೆ ಶುಭಾಶಯಇಂದು ದೇಶದಲ್ಲಿ ವೈದ್ಯರ ದಿನಾಚರಣೆ ಮಾಡುತ್ತಿದ್ದು ಎಲ್ಲ ವೈದ್ಯರಿಗೂ ವೈದ್ಯರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ , ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರಮೇಶ್, ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಆರೋಗ್ಯ ಸುರಕ್ಷಣಾಧಿಕಾರಿ ಮುನಿರತ್ನಮ್ಮ, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ದೇವರಾಜ್, ನಂದಿನಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಾದೂರು ರಘು ಹಾಜರಿದ್ದರು.