ಉತ್ತಮ ಆಡಳಿತ, ಅಭಿವೃದ್ದಿಗೆ ಆದ್ಯತೆ: ಜಿಲ್ಲಾ ಪಂಚಾಯಿತಿ ನೂತನ ಸಿಇಒ ರುಚಿ ಬಿಂದಲ್

| Published : Feb 24 2025, 12:32 AM IST

ಉತ್ತಮ ಆಡಳಿತ, ಅಭಿವೃದ್ದಿಗೆ ಆದ್ಯತೆ: ಜಿಲ್ಲಾ ಪಂಚಾಯಿತಿ ನೂತನ ಸಿಇಒ ರುಚಿ ಬಿಂದಲ್
Share this Article
  • FB
  • TW
  • Linkdin
  • Email

ಸಾರಾಂಶ

ರುಚಿ ಬಿಂದಲ್ ಅವರು ಈ ಹಿಂದೆ ಸರ್ಕಾರದ ಉಪ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಹಾವೇರಿ: 2020ನೇ ಸಾಲಿನ ಐಎಎಸ್ ಬ್ಯಾಚ್‌ನ ಅಧಿಕಾರಿ ರುಚಿ ಬಿಂದಲ್ ಅವರು ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರಿ ಸ್ವೀಕರಿಸಿದರು.

ಈ ಹಿಂದಿನ ಜಿಪಂ ಸಿಇಒ ಅಕ್ಷಯ್ ಶ್ರೀಧರ್‌ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ರುಚಿ ಬಿಂದಲ್‌ ಕರ್ತವ್ಯಕ್ಕೆ ಹಾಜರಾದರು. ರುಚಿ ಬಿಂದಲ್ ಅವರು ಈ ಹಿಂದೆ ಸರ್ಕಾರದ ಉಪ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅಧಿಕಾರಿಗಳ ಸಭೆ: ಕರ್ತವ್ಯಕ್ಕೆ ಹಾಜರಾದ ಮೊದಲ ದಿನವೇ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳ ಮತ್ತು ಸಿಬ್ಬಂದಿ ಸಭೆ ನಡೆಸಿದ ಅವರು ಕರ್ತವ್ಯ ನಿರ್ವಹಣೆ ಬಗ್ಗೆ ಹಲವು ನಿರ್ದೇಶನಗಳನ್ನು ನೀಡಿದರು.

ಕಚೇರಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವುದು ಮತ್ತು ಕೆಲಸಗಳ ವಿಳಂಬಕ್ಕೆ ಆಸ್ಪದ ನೀಡದೆ ಎಚ್ಚರಿಕೆ ವಹಿಸಲು ಖಡಕ್ ಸೂಚನೆ ನೀಡಿದರು. ಕಚೇರಿಯ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಗಾಂಧಿಜಿಯವರ ಕನಸಿನಂತೆ ಸ್ವಚ್ಛ ಪರಿಸರದಿಂದ ಸ್ವಚ್ಛ ಆಡಳಿತ ಹಾಗೂ ಸಮಯ ಪರಿಪಾಲನೆಗೆ ಹೆಚ್ಚಿನ ಆದ್ಯತೆ ನೀಡುವುದು ಮುಖ್ಯ ಎಂದರು.

ಇನ್ನು ಕರ್ತವ್ಯಕ್ಕೆ ಸಂಬಂಧಿಸಿದಂತೆ, ಸಿಬ್ಬಂದಿ ಪತ್ರ ವ್ಯವಹಾರ ಮತ್ತು ಕಡತಗಳ ವಿಳಂಬಕ್ಕೆ ಆಸ್ಪದ ನೀಡದಂತೆ ತ್ವರಿತವಾಗಿ ನಿರ್ವಹಣೆ ಮಾಡುವುದು. ಸಾರ್ವಜನಿಕ ಅಹವಾಲುಗಳನ್ನು ಪ್ರಥಮ ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವುದು ಹಾಗೂ ತ್ವರಿತವಾಗಿ ಸ್ಪಂದನೆ ನೀಡುವುದು ಎಲ್ಲರ ಜವಾಬ್ದಾರಿ ಎಂದು ಎಚ್ಚರಿಸಿದರು.ಉತ್ತಮ ಆಡಳಿತ ಗುರಿ: ಜಿಲ್ಲೆಯಲ್ಲಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿಗಾಗಿ ಆದ್ಯತೆ ನೀಡುವ ಮೂಲಕ ಅಧಿಕಾರ ವಹಿಸಿಕೊಂಡಿದ್ದೇನೆ. ಹಾವೇರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಆಡಳಿತ ಮತ್ತು ಅಭಿವೃದ್ಧಿ ಕಾಮಗಾರಿಗಳಗೆ ಸಂಬಂಧಿಸಿದಂತೆ ಯಾವುದೇ ವಿಳಂಬವಾಗದಂತೆ ಎಲ್ಲರೂ ತಮ್ಮ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.

ನಂತರ ಜಿಲ್ಲಾ ಪಂಚಾಯಿತಿ ಎಲ್ಲ ಶಾಖೆಗಳಿಗೆ ಭೇಟಿ ನೀಡಿ ಸಿಬ್ಬಂದಿ ಕುಂದುಕೊರತೆ ಮತ್ತು ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು. ಅಲ್ಲದೇ ಸ್ವಚ್ಛತೆ ಬಗ್ಗೆ ಕೆಲವೊಂದು ಬದಲಾವಣೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ವೇಳೆ ಅಕ್ಕ ಕೆಫೆಗೆ ಭೇಟಿ ನೀಡಿದ ಅವರು ಸಿಬ್ಬಂದಿ ಜತೆ ಚರ್ಚೆ ನಡೆಸಿದರು. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ತಿಳಿಸಿ, ಮುಂದಿನ ದಿನದಲ್ಲಿ ಜಿಪಂ ಕಡೆಯಿಂದ ನಿರಂತರ ಪ್ರೋತ್ಸಾಹ ನೀಡುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಡಾ. ರಂಗಸ್ವಾಮಿ, ಸಿಪಿಒ ಎಚ್.ವೈ. ಮೀಸಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.ಶರಣರ ತತ್ವ ಸಾರಿದ ಲಿಂ. ಕುಮಾರ ಶಿವಯೋಗಿ

ಹಾನಗಲ್ಲ: ಬಸವಾದಿ ಶರಣರ ತತ್ವಗಳು ಶಾಶ್ವತವಾಗಿ ಉಳಿಸುವ ಕೆಲಸವನ್ನು ಹಾನಗಲ್ಲ ಕುಮಾರಸ್ವಾಮಿಗಳು ಮಾಡಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.ಪಟ್ಟಣದಲ್ಲಿ ಏರ್ಪಡಿಸಿದ್ದ ಲಿಂ. ಹಾನಗಲ್ಲ ಕುಮಾರ ಮಹಾಶಿವಯೋಗಿಗಳ 95ನೇ ಪುಣ್ಯಸ್ಮರಣೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕದಲ್ಲಿ ಹಾನಗಲ್ಲ ಹೆಸರು ಪ್ರಸಿದ್ಧಿಯಾಗಲು ಹಾನಗಲ್ಲ ಕುಮಾರಸ್ವಾಮಿಗಳು ಕಾರಣ. ಇಂತಹ ಪುಣ್ಯಭೂಮಿಯಲ್ಲಿ ಹುಟ್ಟಿರುವ ನಾವೆಲ್ಲರೂ ಪುಣ್ಯವಂತರು ಎಂದರು.ಹುಟ್ಟು ಮತ್ತು ಸಾವು ಎರಡೂ ನಮ್ಮ ಕೈಯಲ್ಲಿ ಇಲ್ಲ. ಅದರ ಬಗ್ಗೆ ನಾವು ಚಿಂತನೆ ಮಾಡುತ್ತೇವೆ. ಬದುಕು ನಮ್ಮ ಕೈಯಲ್ಲಿ ಇದೆ. ಅದರ ಬಗ್ಗೆ ನಾವು ಚಿಂತನೆ ಮಾಡುವುದಿಲ್ಲ ಎಂದರು.

ವಿರಕ್ತರು ಎಂದರೆ ಸರ್ವ ಆಸೆ, ಆಮಿಷಗಳು, ಎಲ್ಲ ವಸ್ತುಗಳ ಮೇಲಿನ ವ್ಯಾಮೋಹ ತ್ಯಜಿಸಿದವರು. ಕುಮಾರಸ್ವಾಮೀಜಿ ಅವರು ಅತ್ಯಂತ ದೊಡ್ಡ ಸಾಧನೆ ಮಾಡಿರುವ ಸಾಧಕರು. ಇದೇ ಸಮಾಜದಲ್ಲಿದ್ದು, ಸಂಸಾರದಲ್ಲಿದ್ದು, ಅದನ್ನು ಜಯಿಸಿ, ಕೆಸರಿನಲ್ಲಿ ಅರಳಿದ ಕಮಲದಂತೆ ಕುಮಾರಸ್ವಾಮಿಗಳು ತಮ್ಮ ಬದುಕನ್ನು ನಡೆಸಿರುವುದು ಹಿಮಾಲಯದಲ್ಲಿ ತಪಸ್ಸು ಮಾಡಿದವರಿಗಿಂತ ಶ್ರೇಷ್ಠ ಎಂದು ಹೇಳಿದರು.ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರು ಗುರುಸಿದ್ದಶಿವಯೋಗೀಂದ್ರ ಮಹಾಸ್ವಾಮಿ, ಹಾಲಕೇರಿಯ ಅನ್ನದಾನೇಶ್ವರ ಮಠದ ಜಗದ್ಗುರು ಶ್ರೀ ಮುಪ್ಪಿನ ಬಸವಲಿಂಗ ಸ್ವಾಮಿಗಳು, ಬಿಜಗಲ್ ವಿರಕ್ತ ಮಠದ ಶಿವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಧಾನಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನ್, ಮಲ್ಲಿಕಾರ್ಜುನ ಹಾವೇರಿ ಹಾಗೂ ಅನೇಕ ಗಣ್ಯರು ಇದ್ದರು.