ಸಾರಾಂಶ
ಶೃಂಗೇರಿ, ಜನರು ತಮ್ಮ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಗಳಿಗೆ ತಕ್ಕಂತೆ ಜನಪ್ರತಿನಿಧಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿ ಆಡಳಿತ ನೀಡಬೇಕು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
ಪಟ್ಟಣ ಪಂಚಾಯಿತಿಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ
ಕನ್ನಡಪ್ರಭ ವಾರ್ತೆ, ಶೃಂಗೇರಿಜನರು ತಮ್ಮ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಗಳಿಗೆ ತಕ್ಕಂತೆ ಜನಪ್ರತಿನಿಧಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿ ಆಡಳಿತ ನೀಡಬೇಕು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
ಪಟ್ಟಣ ಪಂಚಾಯಿತಿಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ಅಭಿವೃದ್ಧಿಗೆ ಅಧಿಕಾರವೊಂದೇ ಮಾನದಂಡವಲ್ಲ. ಉತ್ತಮ ಮನಸ್ಸು ಬೇಕು. ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆ ಯಾಗಬೇಕು. ಆದರೆ ಈ ಸರ್ಕಾರದಲ್ಲಿ ಭಾಗ್ಯಗಳ ಯೋಜನೆಯಿಂದ ಖಜಾನೆಯಲ್ಲಿ ಹಣವೇ ಇಲ್ಲದಂತಾಗಿದೆ. ಇನ್ನೆಲ್ಲಿಯ ಅಭಿವೃದ್ಧಿ ಸಾಧ್ಯ ಎಂದರು.ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪಪಂಗೆ ಸಾಕಷ್ಟುಅನುದಾನ ಹರಿದು ಬರುತ್ತಿತ್ತು. ಶೃಂಗೇರಿ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಯಾಗುತ್ತಿತ್ತು. ಬೈಪಾಸ್ ರಸ್ತೆ ನಿರ್ಮಾಣ, ಕಾಂಕ್ರೀಟ್ ರಸ್ತೆಗಳು ಅಭಿವೃದ್ದಿಯಾಗಿತ್ತು. ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿ ಅಭಿವೃದ್ಧಿಯಾಗಬೇಕು. ಮಂಗಳೂರು ಶಿವಮೊಗ್ಗ ರಾ.ಹೆದ್ದಾರಿ 169 ರ ನೆಮ್ಮಾರು ತನಿಕೋಡುವಿನಿಂದ ಮಾಳದವರೆಗೆ ರಸ್ತೆ ಅಗಲೀಕರಣವಾಗಲಿದೆ. ಇದಕ್ಕೆ ಕೇಂದ್ರ ಸರ್ಕಾರದ ಪ್ರಸ್ತಾವನೆ ಅನುಮೋದನೆಯಾಗಿದ್ದು ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಚ್.ಎಸ್.ವೇಣುಗೋಪಾಲ್, ಉಪಾಧ್ಯಕ್ಷ ಎಂ.ಎಲ್. ಪ್ರಕಾಶ್ ರವರನ್ನು ಅಭಿನಂದಿಸಲಾಯಿತು. ಜಿಪಂ ಮಾಜಿ ಸದಸ್ಯ ಬಿ.ಶಿವಶಂಕರ್, ಪಪಂ ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಸಿ.ಶಂಕರಪ್ಪ, ಪಪಂ ಸದಸ್ಯರಾದ ಅರುಣ, ಶ್ರೀವಿದ್ಯಾ,ರಾಧಿಕಾ ಮತ್ತಿತರರು ಉಪಸ್ಥಿತರಿದ್ದರು.22 ಶ್ರೀ ಚಿತ್ರ 1-
ಶೃಂಗೇರಿ ಪಟ್ಟಣಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಪಂ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವೇಣುಗೋಪಾಲ್, ಉಪಾಧ್ಯಕ್ಷ ಎಂ.ಎಲ್.ಪ್ರಕಾಶರವರನ್ನು ಅಭಿನಂದಿಸಲಾಯಿತು.