ಸಾರಾಂಶ
ಕನಕಪುರ: ದುಶ್ಚಟಗಳಿಂದ ದೂರವಿದ್ದು, ಕ್ರೀಯಾಶೀಲ ಮತ್ತು ಸೃಜನಶೀಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧೀರ್ಘವಾಗಿ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ನಿವೃತ್ತ ಪ್ರಾಧ್ಯಾಪಕ ಕೆ.ಬಿ.ಶ್ರೀಕಾಂತ್ ತಿಳಿಸಿದರು.

ನಗರದ ಸೆಂಟ್ ಥಾಮಸ್ ಪಿಯು ಕಾಲೇಜಿನ ಸಂತ ರೀಟಾ ಸಮುದಾಯ ಭವನದಲ್ಲಿ ಆಯೋಚಿಸಿದ್ದ ತಾಲ್ಲೂಕು ಮಟ್ಟದ ಉಪನ್ಯಾಸಕರ ಪುನಶ್ಚೇತನ ಕಾರ್ಯಾಗಾರ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಇಂದಿನ ಪೈಪೋಟಿ ಹಾಗೂ ಸ್ಪರ್ಧಾತ್ಮಕ ಶಿಕ್ಷಣ ವ್ಯವಸ್ಥೆಯಲ್ಲಿ ಉಪನ್ಯಾಸಕರ ಪಾತ್ರ ಬಹಳ ಮಹತ್ವದಾಗಿದೆ. ದೇಶದ ಮುಂದಿನ ಭವಿಷ್ಯದ ಪ್ರಜೆಗಳಾದ ಯುವಕರನ್ನು ಸರಿದಾರಿಯಲ್ಲಿ ನಡೆಸುವ ಜವಾಬ್ದಾರಿ ಅವರ ಮೇಲಿರುವದರಿಂದ ತಮ್ಮ ವೈಯಕ್ತಿಕ ಜೀವನದಲ್ಲಿ ದುಶ್ಚಟಗಳಿಂದ ದೂರವಿದ್ದು ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಪ್ರಾಂಶುಪಾಲ ಸಂಘದ ಅಧ್ಯಕ್ಷ ಶಿವಣ್ಣ, ಸಂಘದ ಕೋಶಾಧ್ಯಕ್ಷ ಮಹೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಎನ್.ನರಸಿಂಹಸ್ವಾಮಿ, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಪಿ.ನಾಗಮ್ಮ, ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಡಿ.ಕೆ.ಸತ್ಯನಾರಾಯಣ್, ಸಂ.ಕಾ.ಶ್ರೀರಾಮಚಂದ್ರ, ಜಿಲ್ಲಾ ಇತಿಹಾಸ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ನಾಗೇಶ್, ಕಾರ್ಯದರ್ಶಿ ಕೆ.ಯಂ.ಪರಮೇಶ್ ಸೇರಿ ಉಪನ್ಯಾಸಕರು ಇದ್ದರು.