ಜೀವನದಲ್ಲಿ ಸಾಧನೆ ಮಾಡಲು ಸದೃಢ ಆರೋಗ್ಯ ಬಹಳ ಮುಖ್ಯ

| Published : Dec 19 2023, 01:45 AM IST

ಜೀವನದಲ್ಲಿ ಸಾಧನೆ ಮಾಡಲು ಸದೃಢ ಆರೋಗ್ಯ ಬಹಳ ಮುಖ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಜೀವನದಲ್ಲಿ ಸಾಧನೆ ಮಾಡಲು ಸದೃಢ ಆರೋಗ್ಯ ಬಹಳ ಮುಖ್ಯ, ದೇಹವು ರೋಗಗಳ ನೆಲೆಯಾಗದಂತೆ ಎಚ್ಚರ ವಹಿಸಬೇಕು ಹಾಗೂ ದುಶ್ಚಟಗಳಿಂದ ದೂರವಿರಬೇಕು. ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶಿವಾನಂದ ಮ್ಯಾಗೇರಿ ಹೇಳಿದರು.

ಕನ್ನಡಪ್ರಭ ವಾರ್ತೆ ಶಿಗ್ಗಾಂವಿ

ಜೀವನದಲ್ಲಿ ಸಾಧನೆ ಮಾಡಲು ಸದೃಢ ಆರೋಗ್ಯ ಬಹಳ ಮುಖ್ಯ, ದೇಹವು ರೋಗಗಳ ನೆಲೆಯಾಗದಂತೆ ಎಚ್ಚರ ವಹಿಸಬೇಕು ಹಾಗೂ ದುಶ್ಚಟಗಳಿಂದ ದೂರವಿರಬೇಕು. ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶಿವಾನಂದ ಮ್ಯಾಗೇರಿ ಹೇಳಿದರು.

ತಾಲೂಕಿನ ಹುನಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ಹಾಗೂ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಟ್ರಸ್ಟ್, ಶ್ರೀ ಮೃತ್ಯುಂಜಯ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಹುಬ್ಬಳ್ಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ತಜ್ಞ ವೈದ್ಯರುಗಳಿಂದ ಏರ್ಪಡಿಸಿದ್ದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದಿನ ದುಬಾರಿ ವೈದ್ಯಕೀಯ ವೆಚ್ಚದಲ್ಲಿ ಸಾಮಾನ್ಯ ಜನರಿಗೆ ಅನುಕೂಲವಾಗಲು ಆರೋಗ್ಯ ಉಚಿತ ತಪಾಸಣಾ ಶಿಬಿರಗಳು ಎಲ್ಲೆಡೆಯೂ ನಡೆಯಬೇಕು. ಗ್ರಾಮೀಣ ಭಾಗದ ಜನರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಮುಖ್ಯ ಅಥಿತಿಗಳಾಗಿ ಅಂದಲಗಿ ಗ್ರಾಪಂ ಉಪಾಧ್ಯಕ್ಷೆ ಶ್ರೀ ಲಕ್ಷ್ಮವ್ವ ಬಿ. ತಳವಾರ, ಜೆಸಿಐ ಅಧ್ಯಕ್ಷೆ ರಂಜನಾ ಪ್ರಕಾಶ ಔಂದಕರ, ಮೃತ್ಯುಂಜಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಡಾ. ಎಂ.ಎಂ. ತಿರ್ಲಾಪೂರ, ಮುಖಂಡರಾದ ನಾಗರಾಜ ಮೂಲಿಮನಿ, ಗಂಗಾಧರ ಆವಳಿ, ಖಾಸಿಮಸಾಬ ಮುಲ್ಲಾನವರ, ಪ್ರೇಮಾ ಬಡಿಗೇರ, ಶಿವಾನಂದ ಬಾಡದ, ರವಿ ಕೊಟ್ಟಿಗೇರಿ, ಗಣೇಶ ಜನ್ನಾಪೂರ, ಪರಶುರಾಮ ನೆಲ್ಲೂರ, ಎನ್.ವೈ. ಗಂಗಾಧರ, ಗದಿಗೆಪ್ಪ ಹೆಳವರ, ಅನಿಸಾ ತೋಟದ, ಬಸವರಾಜ ಕೊಟ್ಟಿಗೇರಿ, ಖಾದರಗೌಸ ಸಾಣಿ ಹಾಗೂ ಗ್ರಾಮದ ಇತರರಿದ್ದರು.

ಗದಿಗೆಪ್ಪ ಹೆಳವರ ಸ್ವಾಗತಿಸಿದರು. ನಾಗರಾಜ ಮೂಲಿಮನಿ ಕಾರ್ಯಕ್ರಮ ನಿರೂಪಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.