ನೆಲಮಂಗಲ: ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ಬದುಕಿನ 50 ವರ್ಷಗಳ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ತಾಲೂಕು ಅದ್ಯಕ್ಷ ಜಗದೀಶ್ ಚೌಧರಿ ತಿಳಿಸಿದರು.ನಗರದ ಆರಿಶಿನಕುಂಟೆ ಗ್ರಾಮದ ಬಳಿ ಬಿಜೆಪಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಗರಡಿಯಲ್ಲಿ ರಾಜ್ಯದಲ್ಲಿ ಬಹುತೇಕ ಮಂದಿ ನಾಯಕರು ಬೆಳೆದಿದ್ದಾರೆ. ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟವಲ್ಲಿ ಮುಂಚೂಣಿ ನಾಯಕರಾಗಿದ್ದರು. ಜತೆಗೆ ಕಳೆದ 2007ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿ ಮುಖ್ಯಮಂತ್ರಿಯಾಗಿ ಸಾಕಷ್ಟು ಜನಪರ ಯೋಜನೆಗಳನ್ನು ಕೈಗೊಂಡಿದ್ದಾರೆ. ಆದ್ದರಿಂದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಸಕಲ ಸಿದ್ಧತೆ: ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತಾಲೂಕಿನಿಂದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದು, 50ಕ್ಕೂ ಬಸ್ ವ್ಯವಸ್ಥೆ ಮಾಡಲಾಗಿದೆ. ಜತೆಗೆ ನೂರಾರು ಮುಖಂಡರು ಸ್ವಯಂಪ್ರೇರಿತರಾಗಿ ಕಾರು ಹಾಗೂ ಕೆಲ ವಾಹನಗಳ ಮೂಲಕ ಕಾರ್ಯಕ್ರಮಕ್ಕೆ ಆಗಮಿಸಲಿದ್ದು ಕ್ಷೇತ್ರ ಬಿಜೆಪಿ ಪಕ್ಷದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ತಾಲೂಕು ಅದ್ಯಕ್ಷ ಜಗದೀಶ್‌ ಚೌಧರಿ ತಿಳಿಸಿದರು.

ಮುಖಂಡ ಸಪ್ತಗಿರಿಶಂಕರ್‌ ನಾಯಕ್ ಮಾತನಾಡಿ, ನಾಡಿನ ಬಹುತೇಕ ರಾಜಕಾರಣಿಗಳು ಸೇರಿದಂತೆ ಎಷ್ಟೋ ಕಾರ್ಯಕರ್ತರಿಗೆ ಯಡಿಯೂರಪ್ಪ ಪ್ರೇರಣೆಯಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಪಕ್ಷದ ಬೆಳವಣಿಗೆಗೆ ಅವರ ಕೊಡುಗೆ ದೊಡ್ಡದಿದೆ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಹಗಲಿರುಳು ಶ್ರಮಿಸಿದ್ದು ಅವರ ಕೊಡುಗೆ ಮಹತ್ವವಾಗಿದೆ. ಅವರನ್ನು ಅತ್ಯಂತ ಅಭಿಮಾನದಲ್ಲಿ ರಾಜಕೀಯ ಜೀವನವನ್ನು ಅಭಿನಂಧಿಸುವಲ್ಲಿ ನಮ್ಮೆಲ್ಲರ ಭಾಗ್ಯವಾಗಿದೆ ಎಂದರು.

ಸಭೆಯಲ್ಲಿ ಮಾಜಿ ಶಾಸಕ ಎಂ.ವಿ.ನಾಗರಾಜು, ನೆ.ಯೋ.ಪ್ರಾಧಿಕಾರ ಮಾಜಿ ಅದ್ಯಕ್ಷ ಎಸ್.ಮಲ್ಲಯ್ಯ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೇಶ್, ಬಿಜೆಪಿ ತಾಲೂಕು ಉಪಾಧ್ಯಕ್ಷ ಎನ್‌ ರಾಜಶೇಖರ್, ಪ್ರಧಾ ಕಾರ್ಯದರ್ಶಿ ಸತೀಶ್, ರಂಗನಾಥ್ಬಾಬು, ಮಹಿಳಾ ಮೋರ್ಚಾ ಅದ್ಯಕ್ಷೆ ಮಂಜುಳಾಸುರೇಶ್, ಮುಖಂಡ ಉಮೇಶ್, ಅಶ್ವಥ್, ಗಿರೀಶ್, ಮಂಜುನಾಥ್, ಅರುಣ್ಗೌಡ, ರಾಜಮ್ಮಪ್ರಕಾಶ್, ವೇದಾವತಿ, ಮಂಜುಳಾ, ಶಾಂತಕುಮಾರಿ, ಮಂಜಮ್ಮ ಮತ್ತಿತರರು ಉಪಸ್ಥಿತರಿದ್ದರು.

ಪೊಟೊ-6ಕೆಎನ್‌ಎಲ್‌ಎಮ್‌1-


ನೆಲಮಂಗಲದ ಆರಿಶಿನಕುಂಟೆ ಗ್ರಾಮದ ಬಳಿ ಬಿಜೆಪಿ ಪಕ್ಷ ಅಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಮಾತನಾಡಿದರು.