ಸಾರಾಂಶ
ಪುತ್ತೂರಿನ ಲಯನ್ಸ್ ಸೇವಾ ಮಂದಿರದಲ್ಲಿ ಸುಪೋಷಿತ್ ಭಾರತ್ ಹಾಗೂ ಪೋಷಣಾ ಮಹಾ ಕಾರ್ಯಕ್ರಮ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಪಾಲ್ಗೊಂಡರು.
ಪುತ್ತೂರಿನಲ್ಲಿ ಸುಪೋಷಿತ್ ಭಾರತ್ ಹಾಗೂ ಪೋಷಣಾ ಮಹಾ ಕಾರ್ಯಕ್ರಮ
ಪುತ್ತೂರು: ಗರ್ಭಿಣಿಯರು ಮತ್ತು ಮಕ್ಕಳಿಗೆ ಅಗತ್ಯವಾಗಿ ಕೊಡಬೇಕಾದ ಪೌಷ್ಟಿಕ ಆಹಾರ ನೀಡುವುದು ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬಗ್ಗೆ ಪ್ರತಿ ಮನೆ ಮನೆಯಲ್ಲಿ ಮಾಹಿತಿ ನೀಡುವ ಕೆಲಸ ನಡೆಯಬೇಕು. ಈ ಬಗ್ಗೆ ಪಡೆದುಕೊಂಡಿರುವ ಮಾಹಿತಿ ಕಡ್ಡಾಯವಾಗಿ ಪಾಲಿಸುವ ಜವಾಬ್ದಾರಿಯೂ ಜನರಲ್ಲಿ ಇರಬೇಕು ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.ಪುತ್ತೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ದಿ ಯೋಜನೆ ಪುತ್ತೂರು ಕಾನೂನು ಸೇವೆಗಳ ಸಮಿತಿ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರು ಹಾಗೂ ಸ್ತ್ರೀ ಶಕ್ತಿ ಸೊಸೈಟಿ ಪುತ್ತೂರು ಸಹಯೋಗದಲ್ಲಿ ಪುತ್ತೂರಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಸುಪೋಷಿತ್ ಭಾರತ್ ಹಾಗೂ ಪೋಷಣಾ ಮಹಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪುತ್ತೂರು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿ, ಪ್ರತೀ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ತ್ರೀ ಶಕ್ತಿ ಕಾರ್ಯಕತೆಯರು ಮನೆಗಳಿಗೆ ತೆರಳಿ ಮಾಹಿತಿ ನೀಡುವುದರ ಜೊತೆಗೆ ಅರಿವು ಮೂಡಿಸುವ ಕೆಲಸವನ್ನು ಮಾಡಲಿದ್ದಾರೆ ಎಂದರು.
ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮಂಗಳಾ ಕಾಲೆ, ಜಿಲ್ಲಾ ಸ್ತ್ರೀ ಶಕ್ತಿ ಅಧ್ಯಕ್ಷೆ ಶಕುಂತಳಾ, ತಾಲೂಕು ಸ್ತ್ರೀ ಶಕ್ತಿ ಅಧ್ಯಕ್ಷೆ ಕಮಲ, ಜಿಲ್ಲಾ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಸಂಘದ ಅಧ್ಯಕ್ಷೆ ತಾರಾ ಬಲ್ಲಾಲ್, ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಕಮಲ ಇದ್ದರು.ಸಿಡಿಪಿಒ ಹರೀಶ್ ಕೆ ಸ್ವಾಗತಿಸಿದರು. ಮಂಗಳಾ ಕಾಲೆ ವಂದಿಸಿದರು. ಹಿರಿಯ ಮೇಲ್ವಿಚಾರಕಿ ವನಿತಾ ನಿರೂಪಿಸಿದರು.