ಬೆಳ್ತಂಗಡಿ: ಇಂದಿನ ಮತ್ತು ಮುಂದಿನ ದಿನಗಳಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಮಹತ್ವವಿದೆ. ತಾಂತ್ರಿಕ ಜ್ಞಾನ ಹೊಂದಿದ ಯುವಕರಿಗೆ ಉತ್ತಮ ಅವಕಾಶಗಳು ಲಭ್ಯವಿವೆ ಎಂದು ಮುಂಬೈ ಭಾರತೀಯ ರಿಸರ್ವ್ ಬ್ಯಾಂಕ್ ವಿಭಾಗೀಯ ಮಹಾ ಪ್ರಬಂಧಕಿ ಕರ್ಪಗಮ್ ಹೇಳಿದರು.ಅವರು ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ನಡೆದ ಟಿ.ವಿ ಟೆಕ್ನಿಷಿಯನ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿದರು.
ತರಬೇತಿಗಾರರು ತಮ್ಮ ಕೌಶಲ್ಯವನ್ನು ನಿರಂತರವಾಗಿ ನವೀಕರಿಸಿಕೊಂಡು ಪ್ರಾಮಾಣಿಕತೆ ಮತ್ತು ಶಿಸ್ತಿನೊಂದಿಗೆ ಕಾರ್ಯನಿರ್ವಹಿಸಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದರು. ರುಡ್‌ಸೆಟಿ ಸಂಸ್ಥೆಯ ನಿರ್ದೇಶಕ ಅಜಯ್ ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಸಂಕ್ಷಿಪ್ತ ಅವಲೋಕನವನ್ನು ನೀಡಿದರು ಹಾಗೂ ತರಬೇತಿಯ ಮಹತ್ವವನ್ನು ವಿವರಿಸಿದರು.ಉಪನ್ಯಾಸಕಿ ಮಾಧುರಿ ಉಪಸ್ಥಿತರಿದ್ದರು. ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಪಿ.ವಿ.ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ವಂದಿಸಿದರು. ಪ್ರಭಾ ಹಾಗೂ ಪೂಜಾ ಪ್ರಾರ್ಥಿಸಿದರು. ತರಬೇತುದಾರೆ ಬಸಯ್ಯ ಮತ್ತು ಸಾಂಡ್ರ ಡಿ’ಸೋಜಾ ತಮ್ಮ ತರಬೇತಿ ಅನುಭವ ಹಂಚಿಕೊಂಡರು.ತಾಂತ್ರಿಕ ಜ್ಞಾನ ಹೊಂದಿದ ಯುವಕರಿಗೆ ಉತ್ತಮ ಅವಕಾಶ: ಕರ್ಪಗಮ್
ಇಂದಿನ ಮತ್ತು ಮುಂದಿನ ದಿನಗಳಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಮಹತ್ವವಿದೆ. ತಾಂತ್ರಿಕ ಜ್ಞಾನ ಹೊಂದಿದ ಯುವಕರಿಗೆ ಉತ್ತಮ ಅವಕಾಶಗಳು ಲಭ್ಯವಿವೆ ಎಂದು ಮುಂಬೈ ಭಾರತೀಯ ರಿಸರ್ವ್ ಬ್ಯಾಂಕ್ ವಿಭಾಗೀಯ ಮಹಾ ಪ್ರಬಂಧಕಿ ಕರ್ಪಗಮ್ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.