ಸರ್ಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ

| Published : Jan 28 2025, 12:45 AM IST

ಸಾರಾಂಶ

ಸರ್ಕಾರಿ ಶಾಲೆಗಳಲ್ಲಿ ಸರ್ಕಾರದಿಂದ ಸಿಗುವ ಹಲವಾರು ಸೌಲಭ್ಯಗಳನ್ನು ನೀಡಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಯತೀಶ್ ಹೇಳಿದರು. ಗ್ರಾಮೀಣ ಭಾಗದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ರೀತಿ ಅದ್ಧೂರಿಯಾಗಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಸರ್ಕಾರಿ ಶಾಲೆಗಳಲ್ಲಿ ಸರ್ಕಾರದಿಂದ ಸಿಗುವ ಹಲವಾರು ಸೌಲಭ್ಯಗಳನ್ನು ನೀಡಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಯತೀಶ್ ಹೇಳಿದರು.

ಕಸಬಾ ಹೋಬಳಿ ಹೊನ್ನೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಹಾಗೂ 2024 -25ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ರೀತಿ ಅದ್ಧೂರಿಯಾಗಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಎಚ್ ಆರ್ ಡಿ ಗ್ರೂಪ್ ಮಾಲೀಕ ಎಚ್.ಆರ್‌. ದೇವರಾಜ್, ಶ್ರೀ ವೆಂಕಟೇಶ್ವರ ಸ್ವಾಮೀಜಿಯವರ ಸವಿನೆನಪಿಗಾಗಿ ಹೊನ್ನೇನಹಳ್ಳಿ, ತಳಲೂರು, ಈಡಿಗರ ಹಟ್ಟಿ, ರುದ್ರನಹಳ್ಳಿ, ಗುಣಘಟ್ಟಹಳ್ಳಿ ಶಾಲೆಯ ನೂರಾರು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಐದನೇ ತರಗತಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಸಹಾಯಧನ ವಿತರಣೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಲೋಕೇಶ್ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ತಳಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಅಣ್ಣಪ್ಪ, ರಮೇಶ್, ಮಹೇಶ್ ,ಲೋಕೇಶ್ ,ತಳಲೂರು ಕ್ಲಸ್ಟರ್‌ ಸಿಆರ್‌ಪಿ ಚಂದ್ರಕಲಾ, ಪತ್ರಕರ್ತ ಬೋರೆಹಳ್ಳಿ ವೆಂಕಟೇಶ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮದ ಮುಖಂಡರಾದ ವೆಂಕಟರಾಮು, ಹಿರಿಯ ವಿದ್ಯಾರ್ಥಿಗಳು, ಪೋಷಕರು, ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಶಾಲಾ ಮಕ್ಕಳಿಂದ ನೃತ್ಯ ,ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು, ಶಾಲಾ ಮಕ್ಕಳು, ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಬಿ ಎಸ್ ಶೋಭ ಸ್ವಾಗತಿಸಿದರು, ಸಹ ಶಿಕ್ಷಕಿ ಗಂಗಮ್ಮ ವಂದನಾರ್ಪಣೆ ಮಾಡಿದರು.