ಸಾರಾಂಶ
ಕನ್ನಡಪ್ರಭವಾರ್ತೆ, ಸೋಮವಾರಪೇಟೆ
ಕಳೆದ 24 ಗಂಟೆಗಳ ಅವಧಿಯಲ್ಲಿ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಶಾಂತಳ್ಳಿ ಹೋಬಳಿಯಲ್ಲಿ 64 ಮಿ.ಮೀ, ಸೋಮವಾರಪೇಟೆ ಹೋಬಳಿಯಲ್ಲಿ 39 ಮಿ.ಮೀ, ಕೊಡ್ಲಿಪೇಟೆ ಹೋಬಳಿಯಲ್ಲಿ 28.80 ಮಿ.ಮೀ, ಶನಿವಾರಸಂತೆ ಹೋಬಳಿಯಲ್ಲಿ 15 ಮಿ.ಮೀ ಮಳೆ ದಾಖಲಾಗಿದೆ.ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಗರ್ವಾಲೆ ಗ್ರಾಪಂ ವ್ಯಾಪ್ತಿಯ ಮುಟ್ಲು, ಮುಕ್ಕೊಡ್ಲು ಭಾಗಗಳಲ್ಲಿ ಬಿರುಸಿನ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹಟ್ಟಿಹೊಳೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ.
--------------------------------------ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಕನ್ನಡಪ್ರಭ ವಾರ್ತೆ ಮಡಿಕೇರಿಕೊಡಗು ಜಿಲ್ಲೆಯಾದ್ಯಂತ ಬುಧವಾರ ಸಾಧಾರಣ ಮಳೆ ಸುರಿಯಿತು.ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 15.42 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.49 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1633.37 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1009.55 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲೂಕಿನಲ್ಲಿ14.78 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 3.70 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ 12.10 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ 36.70 ಮಿ.ಮೀ. ಮಳೆಯಾಗಿದೆ. ಕುಶಾಲನಗರ ತಾಲೂಕಿನಲ್ಲಿ 9.80 ಮಿ.ಮೀ. ಮಳೆಯಾಗಿದೆ.ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 12.50, ನಾಪೋಕ್ಲು 9.60, ಸಂಪಾಜೆ 12, ಭಾಗಮಂಡಲ 25, ವಿರಾಜಪೇಟೆ 5.40, ಅಮ್ಮತ್ತಿ 2, ಹುದಿಕೇರಿ 33, ಶ್ರೀಮಂಗಲ 7.40, ಪೊನ್ನಂಪೇಟೆ 6, ಬಾಳೆಲೆ 2, ಸೋಮವಾರಪೇಟೆ 39, ಶನಿವಾರಸಂತೆ 15, ಶಾಂತಳ್ಳಿ 64, ಕೊಡ್ಲಿಪೇಟೆ 28.80, ಕುಶಾಲನಗರ 2.60, ಸುಂಟಿಕೊಪ್ಪ 17 ಮಿ.ಮೀ.ಮಳೆಯಾಗಿದೆ.