ಸಾರಾಂಶ
ಕೊಡಗು ಜಿಲ್ಲೆಯಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಮಳೆ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲೆಯಾದ್ಯಂತ ಸೋಮವಾರ ಉತ್ತಮ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಸುರಿಯಿತು. ಬಿಡುವು ನೀಡಿ ಆಗಾಗ್ಗೆ ಮಳೆಯಾದ ಹಿನ್ನೆಲೆಯಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿತು.ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಹಾರಂಗಿ ಜಲಾಶಯದಿಂದ 12,500 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ. ಜಲಾಶಯಕ್ಕೆ ಸುಮಾರು 13 ಸಾವಿರ ಕ್ಯೂಸೆಕ್ ನೀರು ಒಳಹರಿವು ಕಂಡುಬಂದಿದೆ.
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 25. 37 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.98 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2608.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1279.16 ಮಿ.ಮೀ ಮಳೆಯಾಗಿತ್ತು.ಮಡಿಕೇರಿ ತಾಲೂಕಿನಲ್ಲಿ 45.73 ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ 13 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ 8.38 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ 45.55 ಮಿ.ಮೀ. ಹಾಗೂ ಕುಶಾಲನಗರ ತಾಲೂಕಿನಲ್ಲಿ 14.20 ಮಿ.ಮೀ. ಮಳೆಯಾಗಿದೆ.
ಹೋಬಳಿ ವಿವರ: ಮಡಿಕೇರಿ ಕಸಬಾ 92, ನಾಪೋಕ್ಲು 22.20, ಸಂಪಾಜೆ 15.50, ಭಾಗಮಂಡಲ 53.20, ವಿರಾಜಪೇಟೆ 22, ಅಮ್ಮತ್ತಿ 4, ಹುದಿಕೇರಿ 8.10, ಶ್ರೀಮಂಗಲ 11.40, ಪೊನ್ನಂಪೇಟೆ 9, ಬಾಳೆಲೆ 5, ಸೋಮವಾರಪೇಟೆ 64.20, ಶನಿವಾರಸಂತೆ 40, ಶಾಂತಳ್ಳಿ 56, ಕೊಡ್ಲಿಪೇಟೆ 22, ಕುಶಾಲನಗರ 8.40, ಸುಂಟಿಕೊಪ್ಪ 20 ಮಿ.ಮೀ.ಮಳೆಯಾಗಿದೆ.