ಸಾರಾಂಶ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರಾತ್ರಿ ಉತ್ತಮ ಮಳೆಯಾಗಿದೆ. ಹೀಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಪಟ್ಟಣದ ಹಿರಿಯರಾದ ಬಸವರಾಜ ಹಾರಿವಾಳ ಅವರನ್ನು ಮಾತನಾಡಿಸಿದಾಗ, ನಿನ್ನೆ ರಾತ್ರಿ ಸುರಿದ ರೋಹಿಣಿ ಮಳೆಯು ಉತ್ತಮವಾಗಿದೆ. ಇದು ಬಿತ್ತನೆ ಮಾಡಲು ಬೇಕಾದ ಮಳೆ ನೀಡಿದೆ. ಇಂದು ಜೂ.೭ ರಂದು ಮೃಗಾ ಮಳೆ ಕೂಡುತ್ತದೆ. ಗುರುವಾರ ಮಧ್ಯಾಹ್ನವೂ ಪಟ್ಟಣ ಹೊರವಲಯದ ಸುತ್ತಮುತ್ತ ಮೃಗಾ ಮಳೆಯು ಆಗಿದೆ. ಇದರಿಂದಾಗಿ ಬಿತ್ತನೆ ಮಾಡಲು ಅಗತ್ಯ ತಯಾರಿ ಮಾಡಿಕೊಳ್ಳಲಾಗುವುದು ಎಂದರು.
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರಾತ್ರಿ ಉತ್ತಮ ಮಳೆಯಾಗಿದೆ. ಹೀಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.ಪಟ್ಟಣದ ಹಿರಿಯರಾದ ಬಸವರಾಜ ಹಾರಿವಾಳ ಅವರನ್ನು ಮಾತನಾಡಿಸಿದಾಗ, ನಿನ್ನೆ ರಾತ್ರಿ ಸುರಿದ ರೋಹಿಣಿ ಮಳೆಯು ಉತ್ತಮವಾಗಿದೆ. ಇದು ಬಿತ್ತನೆ ಮಾಡಲು ಬೇಕಾದ ಮಳೆ ನೀಡಿದೆ. ಇಂದು ಜೂ.೭ ರಂದು ಮೃಗಾ ಮಳೆ ಕೂಡುತ್ತದೆ. ಗುರುವಾರ ಮಧ್ಯಾಹ್ನವೂ ಪಟ್ಟಣ ಹೊರವಲಯದ ಸುತ್ತಮುತ್ತ ಮೃಗಾ ಮಳೆಯು ಆಗಿದೆ. ಇದರಿಂದಾಗಿ ಬಿತ್ತನೆ ಮಾಡಲು ಅಗತ್ಯ ತಯಾರಿ ಮಾಡಿಕೊಳ್ಳಲಾಗುವುದು ಎಂದರು.
ನಿನ್ನೆ ರಾತ್ರಿ ಸುರಿದ ಮಳೆಯಿಂದ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಎರಡು ಮನೆ ಭಾಗಶಃ, ಯರನಾಳ ಗ್ರಾಮದಲ್ಲಿ ಒಂದು ಕಚ್ಚಾ ಮನೆ ಭಾಗಶಃ ಹಾನಿಯಾಗಿದೆ. ಮಳೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾಹಿತಿ ನೀಡಿದರು.ಬಸವನಬಾಗೇವಾಡಿ ಮಳೆ ಮಾಪನ ಕೇಂದ್ರದಲ್ಲಿ ೫೩.೨ ಎಂಎಂ, ಹೂವಿನಹಿಪ್ಪರಗಿ ಮಳೆ ಮಾಪನ ಕೇಂದ್ರದಲ್ಲಿ ೧೬.೨ ಎಂಎಂ., ಮನಗೂಳಿ ಮಳೆ ಮಾಪನ ಕೇಂದ್ರದಲ್ಲಿ ೧೭ ಎಂಎಂ. ಮಳೆ ದಾಖಲಾಗಿದೆ ಎಂದು ತಹಸೀಲ್ದಾರ ಕಾರ್ಯಾಲಯದ ಮೂಲಗಳು ತಿಳಿಸಿವೆ.