ಸಾರ್ವನಿಜಕರೊಂದಿಗೆ ಉತ್ತಮ ಬಾಂಧವ್ಯ: ಅಧಿಕಾರಿಗಳಿಗೆ ಡಿಸಿ ಕರೆ

| Published : Jan 02 2024, 02:15 AM IST

ಸಾರ್ವನಿಜಕರೊಂದಿಗೆ ಉತ್ತಮ ಬಾಂಧವ್ಯ: ಅಧಿಕಾರಿಗಳಿಗೆ ಡಿಸಿ ಕರೆ
Share this Article
  • FB
  • TW
  • Linkdin
  • Email

ಸಾರಾಂಶ

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮಾತನಾಡಿ, ಹಿಂದಿನ ಸಭೆಯಲ್ಲಿ ಚರ್ಚಿಸಲಾದ ಹತ್ತು ಪ್ರಕರಣಗಳ ಮಾಹಿತಿ ಒದಗಿಸಿದರು. ಮುಂದಿನ ಸಭೆಗೆ ಮುನ್ನ ಇತ್ಯರ್ಥವಾಗದ ಪ್ರಕರಣ ಸರಿಪಡಿಸಲು ತಿಳಿಸಿದರು.ಸಫಾಯಿ ಕರ್ಮಚಾರಿಗಳ ಸಮಿತಿಯ ಸದಸ್ಯ ರಂಗಸ್ವಾಮಿ ಮಾತನಾಡಿ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಫಾಯಿ ಕರ್ಮಚಾರಿಗಳ ಸಭೆ ನಡೆಸಲಾಗಿದ್ದು, ಸ್ವಚ್ಛತಾಗಾರರನ್ನು ಖಾಯಂಗೊಳಿಸಲು, ನಿವೇಶನದ ಹಕ್ಕುಪತ್ರ ಒದಗಿಸಲು, ಸಫಾಯಿ ಕರ್ಮಚಾರಿಗಳಿಗೆ ಭದ್ರತೆ ನೀಡಲು ಜಿಲ್ಲಾಧಿಕಾರಿಗಳ ಬಳಿ ಮನವಿ ಮಾಡಿದರು.

ಸಫಾಯಿ ಕರ್ಮಚಾರಿಗಳಿಗೆ ಪಿಎಫ್ ಸೌಲಭ್ಯ ಹಾಗೂ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಕೌಶಲ್ಯ ಆಧಾರಿತ ತರಬೇತಿಗೆ ಮನವಿ ಮಾಡಿದರು. ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಪ್ರತಿಯೊಂದು ಪ್ರಕರಣಗಳನ್ನು ಹಂತ-ಹಂತವಾಗಿ ಪರಿಹರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಅವರು ವಿವಿಧ ಅಭಿವೃದ್ಧಿ ಇಲಾಖೆಗಳ ಪರಿಶಿಷ್ಟ ಪಂಗಡದ ಉಪಯೋಜನೆಗಳ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು. ಹಾಗೆಯೇ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗಕ್ಕೆ ನೀಡಲಾಗುತ್ತಿರುವ ಸೌಲಭ್ಯ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಪ್ರಚಲಿತ ಕೋವಿಡ್ ಸಂಬಂಧಿಸಿದ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ವಿವರಿಸಿದರು. ಕೋವಿಡ್ ಸಂಬಂಧಿಸಿದಂತೆ ಭಯಪಡುವ ಅಗತ್ಯ ಇಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ ತೆಗೆದುಕೊಂಡಿರುವುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯಿತ್ ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಪಳನಿ ಪ್ರಕಾಶ್, ಪಿ.ಪಿ.ಸುಕುಮಾರ್, ಜಾಯ್ಸ್ ಮೇನೆಜಸ್, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಯ ಯೋಜನಾ ಸಮನ್ವಯ ಅಧಿಕಾರಿ ಎಸ್.ಹೊನ್ನೇಗೌಡ, ಡಿವೈಎಸ್‌ಪಿ ಜಗದೀಶ್, ಲೋಕೋಪಯೋಗಿ ಇಇ ಸಿದ್ದೇಗೌಡ, ಜಿ.ಪಂ.ಎಂಜಿನಿಯರ್ ಸುರೇಶ್ ಕುಮಾರ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಸೆಸ್ಕ್ ಇಇ ಅನಿತಾ ಬಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ಪುಟ್ಟರಾಜು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ಕಾರ್ಮಿಕ ಇಲಾಖೆ ಅಧಿಕಾರಿ ಹರ್ಷವರ್ಧನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ತಹಶೀಲ್ದಾರಾದ ಪ್ರವೀಣ್ ಕುಮಾರ್, ಎಸ್.ಎನ್.ನರಗುಂದ, ಪ್ರಶಾಂತ್, ಕಿರಣ್ ಗೌರಯ್ಯ, ರಾಮಚಂದ್ರ, ತಾ.ಪಂ.ಇಒಗಳಾದ ಅಪ್ಪಣ್ಣ, ಜಯಣ್ಣ, ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಸೋಮವಾರಪೇಟೆ ಪ.ಪಂ.ಮುಖ್ಯಾಧಿಕಾರಿ ಪಿ.ಕೆ.ನಾಚಪ್ಪ, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮತ್ತಿತರರು ಇದ್ದರು.