ಸಾರಾಂಶ
ಕನ್ನಡರಾಜ್ಯೋತ್ಸವ ಸಮಾರಂಭದಲ್ಲಿ ಕರವೇ ಗ್ರಾಮ ಘಟಕದ ಅಧ್ಯಕ್ಷ ಅಸ್ಲಾಂ ಶೇಖ್ ಮಾತನಾಡಿದರು.
ಟಿಪ್ಪು ಸುಲ್ತಾನ್ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡಪ್ರಭ ವಾರ್ತೆ ಚನ್ನಗಿರಿ
ಪಟ್ಟಣದ ಮುದ್ದೇನಹಳ್ಳಿ ರಸ್ತೆಯಲ್ಲಿರುವ ಟಿಪ್ಪು ಸುಲ್ತಾನ್ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಕ್ಷಣಾ ವೇಧಿಕೆಯ ಗ್ರಾಮ ಘಟಕದ ಅಧ್ಯಕ್ಷ ಕೆರೆಬಿಳಚಿ ಅಸ್ಲಾಂ ಶೇಖ್, ಸರ್ಕಾರ ಆಡಳಿತ ಭಾಷೆಯನ್ನಾಗಿ ಕನ್ನಡದಲ್ಲಿ ವ್ಯವಹರಿಸುತ್ತಿದ್ದು, ಪ್ರತಿಯೊಬ್ಬರು ಕನ್ನಡ ಭಾಷೆ ಕಲಿತುಕೊಂಡಾಗ ಉತ್ತಮ ಬಾಂಧವ್ಯಗಳನ್ನು ಇಟ್ಟುಕೊಂಡು ಸ್ನೇಹಮಯವಾಗಿ ಜೀವಿಸಲು ಸಾಧ್ಯ ಎಂದು ಹೇಳಿದರು.
ಕನ್ನಡ ನಾಡು ಹಿತರಕ್ಷಣಾ ಸಮಿತಿಯ ಗೌರವ ಅಧ್ಯಕ್ಷ ಮಹಮದ್ ಸರ್ಧಾರ್ ಮಾತನಾಡಿ, ಕನ್ನಡ ಭಾಷೆಯ ಮಹತ್ವದ ಬಗ್ಗೆ ತಿಳಿಸಿದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಚಾರ್ಯ ಅಪ್ರೋಜ್ ಆಲಿಖಾನ್, ಶಾಲಾ ಮುಖ್ಯ ಶಿಕ್ಷಕ ಮಹೇಜಬೀನ್ ಖಾನಂ, ಆಮೀರ್ ಹಾಶ್ಮಿ, ಶಾಲೆಯ ಶಿಕ್ಷಕರು, ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು.