ಒಳ್ಳೆಯ ಸಂಶೋಧನೆಗಳು ರಾಷ್ಟ್ರದ ಅಭಿವೃದ್ದಿಗೆ ಸಹಾಯಕ: ಅರ್ಚನಾ ಸಿ.

| Published : Feb 26 2025, 01:07 AM IST

ಸಾರಾಂಶ

ಒತ್ತಡ, ಖಿನ್ನತೆ ಹಾಗೂ ಆತಂಕ ಕಾಯಿಲೆ ಹಾಗೂ ಮುಂತಾದ ಮಾನಸಿಕ ಕಾಯಿಲೆಗಳಿಗೆ ಕೃತಕ ಬುದ್ಧಿ ಮತ್ತೆಯಿಂದ ಪರಿಹಾರಗಳನ್ನು ಕಂಡುಹಿಡಿಯುವಲ್ಲಿ ಸಂಶೋಧನಾ ಚಟುವಟಿಕೆ ಪ್ರಾರಂಭವಿಸುವಲ್ಲಿ ವಿವಿಧ ಸಂಸ್ಥೆಗಳು ಮುಂದೆ ಬರುತ್ತಿವೆ ಎಂದು ಅರ್ಚನಾ ಸಿ. ಹೇಳಿದರು.

ಧಾರವಾಡ: ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ವಿಭಾಗ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಅತ್ಯುತ್ತಮವಾದ ಸಂಶೋಧನೆಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಒಳ್ಳೆಯ ಸಂಶೋಧನೆಗಳು ರಾಷ್ಟ್ರದ ಅಭಿವೃದ್ದಿಗೆ ಸಹಾಯಕವಾಗುತ್ತವೆ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆಯಿದೆ ಎಂದು ಬೆಂಗಳೂರಿನ ಕಿಟ್ಸ್‌ (ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ) ವ್ಯವಸ್ಥಾಪಕಿ ಅರ್ಚನಾ ಸಿ. ಹೇಳಿದರು.

ಇಲ್ಲಿಯ ಡಿಮಾನ್ಸ್‌ನ ಆವರಣದಲ್ಲಿ ಸ್ಟಾರ್ಟ್ ಅಪ್ ಕರ್ನಾಟಕ, ಕಿಟ್ಸ್ ಸಂಸ್ಥೆ, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ವಿಭಾಗ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಜೊತೆಗೂಡಿ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಇಂದು ಒತ್ತಡ, ಖಿನ್ನತೆ ಹಾಗೂ ಆತಂಕ ಕಾಯಿಲೆ ಹಾಗೂ ಮುಂತಾದ ಮಾನಸಿಕ ಕಾಯಿಲೆಗಳಿಗೆ ಕೃತಕ ಬುದ್ಧಿ ಮತ್ತೆಯಿಂದ ಪರಿಹಾರಗಳನ್ನು ಕಂಡುಹಿಡಿಯುವಲ್ಲಿ ಸಂಶೋಧನಾ ಚಟುವಟಿಕೆಗಳು ಪ್ರಾರಂಭವಿಸುವಲ್ಲಿ ವಿವಿಧ ಸಂಸ್ಥೆಗಳು ಮುಂದೆ ಬರುತ್ತಿವೆಯೆಂದು ಹೇಳಿದರು.

ಡಿಮ್ಹಾನ್ಸ್ ಸಂಸ್ಥೆಯು ಈ ನಿಟ್ಟಿನಲ್ಲಿ ಸಂಶೋಧನಾ ಚಟುವಟಿಕೆಗಳನ್ನು ಪ್ರಾರಂಭಿಸಿರುವುದು ಸಂತೋಷದ ವಿಷಯ. ಈ ಕಾರ್ಯಾಗಾರದಲ್ಲಿ ಭಾಗವಹಿಸಿದ ಸಂಶೋಧಕರು ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ನೀಡುವ ಮಾಹಿತಿ ಪಡೆದುಕೊಂಡು ಹೊಸ ಸಂಶೋಧನೆಗಳನ್ನು ಮಾಡಲು ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಡಿಮ್ಹಾನ್ಸ್ ನಿರ್ದೇಶಕ ಡಾ. ಅರುಣಕುಮಾರ ಸಿ., ಮಾತನಾಡಿ, ನೂತನ ಸಂಶೋಧನೆಗಳು ಮತ್ತು ಸಮಾಜದ ಒಳಿತಿಗಾಗಿ ಬೇಕಾಗಿರುವ ಸಂಶೋಧನೆಗಳು ಅಗತ್ಯವಾಗಿವೆ. ಸಂಶೋಧನಾ ವಿದ್ಯಾರ್ಥಿಗಳು, ವೃತ್ತಿಪರ ಸಂಶೋಧಕರು, ವಿದ್ಯಾರ್ಥಿಗಳು ಹೊಸ ಸಂಶೋಧನೆಗಳಿಗೆ ಇರುವ ಸಾಕಷ್ಟು ಅವಕಾಶಗಳನ್ನು ತಿಳಿದುಕೊಳ್ಳಬೇಕಾಗಿದೆ ಎಂದರು.

ಮಾನಸಿಕ ಆರೋಗ್ಯ ಹಾಗೂ ಕೃತಕ ಬುದ್ದಿಮತ್ತೆಗೆ ಸಂಬಂಧಿಸಿದತೆ ಹೊಸ ಸಂಶೋಧನೆಗಳು ಪ್ರಾರಂಭವಾಗಿದೆ. ಆಧುನಿಕ ತಂತ್ರಜ್ಞಾನದ ಪ್ರಯೋಜನದಿಂದ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಲು ಸಂಶೋಧನಾ ಚಟುವಟಿಕೆಗೆ ಉತ್ತೇಜನ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಸಂಶೋಧನಾ ಚಟುವಟಿಕೆಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಐಐಐಟಿ ಸಂಸ್ಥೆ ಧಾರವಾಡದ ಸಹಯೋಗದಲ್ಲಿ ಸಂಶೋಧನಾ ಚಟುವಟಿಕೆ ಪ್ರಾರಂಭಿಸಲಾಗಿದೆ ಎಂದರು.

ಡಿಮ್ಹಾನ್ಸ್ ಮುಖ್ಯ ಆಡಳಿತಾಧಿಕಾರಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಮಾತನಾಡಿ, ಕರ್ನಾಟಕದ ಬಹುತೇಕ ಜಿಲ್ಲೆಗಳಿಂದ ಡಿಮ್ಹಾನ್ಸ್ ಸಂಸ್ಥೆಗೆ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಬರುತ್ತಿದ್ದಾರೆ. ಇಲ್ಲಿ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ನೀಡಲಾಗುತ್ತಿದೆ. ನ್ಯೂರೋ ಸರ್ಜರಿ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ಸರ್ಕಾರದಿಂದ ಉತ್ತಮ ಬೆಂಬಲ ದೊರಕಿದೆ ಎಂದರು.

ಈ ಕಾರ್ಯಾಗಾರದಲ್ಲಿ ಅತಿಥಿಗಳಾಗಿ ಧಾರವಾಡ ಐಐಐಟಿಯ ಪ್ರೊ. ಎಸ್.ಆರ್. ಮಹದೇವ ಪ್ರಸನ್ನ ಭಾಗವಹಿಸಿ ಮಾತನಾಡಿದರು. 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ ಭಾಗವಹಿಸಿದ್ದರು. ಸಂಘಟನಾ ಮುಖ್ಯಸ್ಥ ಡಾ. ಶ್ರೀನಿವಾಸ ಕೊಸಗಿ, ಡಾ. ಶಿವರುದ್ರಪ್ಪ ಭೈರಪ್ಪನವರ, ಡಾ. ಸುಶೀಲ ಕುಮಾರ ರೋಣದ, ಡಾ. ಮಂಜುನಾಥ ಭಜಂತ್ರಿ, ಡಾ. ಮೇಘಮಾಲಾ ಟಿ., ಅಶೋಕ ಕೋರಿ, ಆರ್.ಎಂ. ತಿಮ್ಮಾಪೂರ ಮತ್ತಿತರರು ಇದ್ದರು.