ಸಾರಾಂಶ
ಈ ಬಾರಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಅನಾಥರು, 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವೃದ್ಧಾಶ್ರಮ ನಿವಾಸಿಗಳಿಗೆ ಉಚಿತ ಪ್ರವೇಶ
ಕನ್ನಡಪ್ರಭ ವಾರ್ತೆ ಮೈಸೂರು
ನಗರದಲ್ಲಿ ದಸರಾ ಕೇಕ್ ಶೋಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ವಿಶೇಷ ಆಕರ್ಷಣೆಯಾಗಿ ಈ ಬಾರಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಅನಾಥರು, 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವೃದ್ಧಾಶ್ರಮ ನಿವಾಸಿಗಳಿಗೆ ಉಚಿತ ಪ್ರವೇಶ ನೀಡಲಾಗಿದೆ ಎಂದು ಆಯೋಜಕ ದಿನೇಶ್ ಹೇಳಿದರು.ಕೇಕ್ ಶೋನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂಬ ವಿಶಿಷ್ಟ ಥೀಮ್ ಆಯ್ಕೆ ಮಾಡಲಾಗಿದ್ದು, ಆಧುನಿಕ ಮೈಸೂರಿನ ನಿರ್ಮಾಣಕ್ಕೆ ಕಾರಣರಾದ ಅವರ ದರ್ಶನವನ್ನು ಸ್ಮರಿಸುತ್ತದೆ. ಮೈಸೂರು ಅರಮನೆ, ನಾಲ್ವಡಿ ಅವರ ಸಾಧನೆಗಳಿಂದ ಪ್ರೇರಿತ ಮಾದರಿಗಳನ್ನು ಕೇಕ್ ರೂಪದಲ್ಲಿ ಕಲಾತ್ಮಕವಾಗಿ ಸಿದ್ಧಪಡಿಸಲಾಗಿದೆ ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.