ಸ್ವಚ್ಛತಾ ಅಭಿಯಾನಕ್ಕೆ ನಾಪೋಕ್ಲು ಪಟ್ಟಣದಲ್ಲಿ ಉತ್ತಮ ಸ್ಪಂದನ

| Published : Oct 21 2025, 01:00 AM IST

ಸಾರಾಂಶ

ಸ್ವಚ್ಛ ಕೊಡಗು - ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನಕ್ಕೆ ನಾಪೋಕ್ಲು ಪಟ್ಟಣದಲ್ಲಿ ಉತ್ತಮ ಸ್ಪಂದನೆ ದೊರೆಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಕೊಡಗು - ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನಕ್ಕೆ ನಾಪೋಕ್ಲು ಪಟ್ಟಣದಲ್ಲಿ ಉತ್ತಮ ಸ್ಪಂದನ ದೊರೆಯಿತು.

ಇಲ್ಲಿನ ಗ್ರಾಮ ಪಂಚಾಯಿತಿ ಹಾಗೂ ವರ್ತಕರ ಸಂಘ , ಸಹಕಾರ ಮಹಿಳಾ ಸಮಾಜ ದ ವತಿಯಿಂದ ಸ್ವಚ್ಛತಾ ಆಂದೋಲನ ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ, ವರ್ತಕರ ಸಂಘ ದ ಅಧ್ಯಕ್ಷ ಮಾಚೆಟ್ಟಿರ ಕುಸು ಕುಶಾಲಪ್ಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೊಂದಕ್ಕಿ, ಸಹಕಾರ ಮಹಿಳಾ ಸಮಾಜ ದ ಅಧ್ಯಕ್ಷ ಕುಚ್ಚೇಟಿರ ರೇಷ್ಮಾ ಉತ್ತಪ್ಪ, ಲಯನ್ಸ್‌ ಮಾಜಿ ಅಧ್ಯಕ್ಷ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಪಂಚಾಯಿತಿ ಸದಸ್ಯರು ಸಿಬ್ಬಂದಿ ಪಾಲ್ಗೊಂಡಿದ್ದರು.