ಸಾರಾಂಶ
ಹೊಸದುರ್ಗ: ನಿರಂತರ ಅಭ್ಯಾಸದಿಂದ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಶಿವಣ್ಣ ತಿಳಿಸಿದರು.
ಕಲ್ಕೆರೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳಿಗೆ ಉಚಿತ ಟ್ಯೂಷನ್ ಕ್ಲಾಸ್ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ನಿರಂತರ ಅಭ್ಯಾಸ ಮಾಡಬೇಕು. ಅಭ್ಯಾಸ ಮಾಡಿದ್ದನ್ನು ಪ್ರತಿದಿನ ಮನನ ಮಾಡಬೇಕು. ಆಗ ಕಲಿಕೆಯಿಂದ ವಿದ್ಯೆ ಶಾಶ್ವತವಾಗಿ ಉಳಿಯುತ್ತದೆ. ಇದರಿಂದ ಉತ್ತಮ ಪರೀಕ್ಷೆ ಫಲಿತಾಂಶ ದೊರೆಯಲು ಸಾಧ್ಯವಿದೆ. ವಿದ್ಯಾರ್ಥಿಗಳು ಕಲಿಯುವ ಸಂದರ್ಭದಲ್ಲಿ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೇ ಪುಸ್ತಕವೇ ದೇವರೆಂದು ಅಭ್ಯಾಸ ಮಾಡಬೇಕು ಎಂದರು.
ಹೊಸದುರ್ಗ ತಾಲೂಕಿನಲ್ಲಿ 6 ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ ಹಾಗೂ 1 ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ತರಬೇತಿಯನ್ನು ಬೆಳಿಗ್ಗೆ ಮತ್ತು ಸಂಜೆ ಪ್ರಾರಂಭ ಮಾಡಿದ್ದು, ಮಕ್ಕಳಿಗೆ ಉಚಿತವಾಗಿ ಟ್ಯೂಷನ್ ಹೇಳಿಕೊಡಲಾಗುತ್ತಿದೆ. ಸಂಬಂಧಪಟ್ಟ ಶಿಕ್ಷಕರ ಗೌರವಧನವನ್ನು ಗ್ರಾಮಾಭಿವೃದ್ಧಿ ಯೋಜನೆ ನೀಡುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಟ್ಯೂಷನ್‌ಗೆ ಕಳಿಸಬೇಕು ಎಂದರು.ಎಸ್‌ಡಿಎಂಸಿ ಅಧ್ಯಕ್ಷ ಉಮೇಶ್ ಮಾತನಾಡಿ, ಬಡಮಕ್ಕಳಿಗಾಗಿ ಧರ್ಮಸ್ಥಳ ವಿರೇಂದ್ರ ಹೆಗ್ಗಡೆಯವರು ಪ್ರಾಥಮಿಕ ಮತ್ತು ಹಿಂದುಳಿದ ಗ್ರಾಮದಲ್ಲಿ ಈ ರೀತಿಯ ವಿಶೇಷ ಟ್ಯೂಷನ್ ಕ್ಲಾಸ್ ಅಭಿಯಾನದ ಮೂಲಕ ಮಕ್ಕಳ ಓದಿನ ಆಸಕ್ತಿ ಹೆಚ್ಚುತ್ತಿರುವುದು ನಮ್ಮೆಲ್ಲರ ಸೌಭಾಗ್ಯ ಎಂದರು.
ಮಾಜಿ ಗ್ರಾಪಂ ಸದಸ್ಯರು ತಿಪ್ಪಣ್ಣ ಮಾತನಾಡಿದರು.ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್, ಒಕ್ಕೂಟದ ಅಧ್ಯಕ್ಷ ನವೀನ್ ಕುಮಾರಿ, ಸ್ವಾಮಿ, ತುಕಾರಾಮ್, ಮಮತಾ ವಿದ್ಯಾರ್ಥಿಗಳು ಇನ್ನಿತರು ಹಾಜರಿದ್ದರು.