ಕನ್ನಡಪ್ರಭ ವಾರ್ತೆ ತುಮಕೂರು
ಶಾಂತಿ, ಸುಧರ್ಮದಿಂದ ಸದೃಢ ಸಮಾಜ ಕಟ್ಟಲು ಸಾಧ್ಯ ಎಂದು ಜಗದ್ಗುರು ರೇಣುಕಾಚಾರ್ಯರು ಸಂದೇಶ ನೀಡಿದ್ದು ಅವರು ನೀಡಿದ ಸಂದೇಶ ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾ ನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಸಂಘಸಂಸ್ಥೆಗಳ ಆಶ್ರಯದಲ್ಲಿ ಭಾನುವಾರ ನಗರದ ಜಗದ್ಗುರು ರೇಣುಕಾಚಾರ್ಯ ವೃತ್ತ (ಭದ್ರಮ್ಮ ವೃತ್ತ)ದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದ ಏಳಿಗೆಗಾಗಿ ಎಲ್ಲರೂ ರೇಣುಕಾಚಾರ್ಯರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೋರಿದರು.
ನೊಣವಿನಕೆರೆ ಕಾಡಸಿದ್ಧೇಶ್ವರ ಸಂಸ್ಥಾನ ಮಠದ ಡಾ.ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಸಮಾರಂಭದ ಸಾನಿಧ್ಯವಹಿಸಿ, ಮಾನವ ಧರ್ಮಕ್ಕೆ ಜಯವಾಗಲಿ, ಆ ಮೂಲಕ ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂಬ ಆಶಯದ ಸಂದೇಶ ನೀಡಿರುವ ರೇಣುಕಾಚಾರ್ಯರು, ಜಗತ್ತಿನ ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಬಾಳಬೇಕು. ಭಾವೈಕ್ಯತೆಯಿಂದ ಬಾಳುವುದರೊಂದಿಗೆ ಮಾನವ ಜನ್ಮದ ಶ್ರೇಷ್ಠತೆ ಸಾರಬೇಕು ಎಂದು ಹೇಳಿದ್ದಾರೆ. ಮಹನೀಯರ ಸಂದೇಶಗಳನ್ನು ಎಲ್ಲರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.ತುಮಕೂರು ತಹಸೀಲ್ದಾರ್ ರಾಜೇಶ್ವರಿ ಮಾತನಾಡಿ, ವೀರಶೈವ ಸಮಾಜ ಶಿಕ್ಷಣ, ದಾಸೋಹಕ್ಕೆ ಹೆಸರಾಗಿದೆ. ಅದೇ ಪರಂಪರೆ ಮುಂದುವರೆದಿದೆ. ಸಮಾಜದವರು ಎಲ್ಲಾ ಕ್ಷೇತ್ರಗಳಲ್ಲೂ ದೊಡ್ಡ ಕೊಡುಗೆ ನೀಡಿದ್ದಾರೆ. ಅಂತಹ ಸಾಧಕರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯೋಣ ಎಂದು ಹೇಳಿದರು.
ಜಿಲ್ಲಾ ಕನ್ನಡ ಸಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ನಗರ ವೀರಶೈವ ಸಮಾಜ ಸೇವಾ ಸಮತಿ ಅಧ್ಯಕ್ಷ ಕೋರಿ ಮಂಜುನಾಥ್, ಉಪಾಧ್ಯಕ್ಷ ಟಿ.ಬಿ. ಹರೀಶ್, ಕಾರ್ಯದರ್ಶಿ ಶಶಿಧರನ್, ಖಜಾಂಚಿ ಜಿ.ಕೆ.ಸ್ವಾಮಿ ಹಾಗೂ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಮೇಲ್ವಿಚಾರಕರಾದ ಸುರೇಶ್‌ಕುಮಾರ್, ವೀರಶೈವ ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ.ಜೆ.ರುದ್ರಪ್ಪ, ಉಪಾಧ್ಯಕ್ಷ ಹೆಬ್ಬಾಕ ಮಲ್ಲಿಕಾರ್ಜುನ್, ಸ್ನೇಹ ಸಂಗಮ ಪತ್ತಿನ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಬಿ.ಎಸ್.ಮಂಜುನಾಥ್, ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಆರ್.ಸದಾಶಿವಯ್ಯ, ಬಸವೇಶ್ವರ ಕ್ರೆಡಿಟ್ ಕೋ ಆಪರೇಟೀವ್ ಬ್ಯಾಂಕ್ ಅಧ್ಯಕ್ಷ ಟಿ.ಸಿ.ಓಹಿಲೇಶ್ವರ್, ಗುರು ಸಿದ್ಧೇಶ್ವರ ಸೌಹಾರ್ದ ಸಹಕಾರ ಬ್ಯಾಂಕ್ ಅಧ್ಯಕ್ಷ ನಾ.ಚಂ.ಗಂಗಾಧರ ಶಾಸ್ತ್ರೀ, ಶಿವಶ್ರೀ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ಎಸ್.ಸಿದ್ಧರಾಜು, ಉಪಾಧ್ಯಕ್ಷ ಟಿ.ಎಸ್.ಕರುಣಾರಾಧ್ಯ, ಗುರು ಸಿದ್ಧರಾಮೇಶ್ವರ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಜಿ.ಎಸ್.ರವಿಶಂಕರ್, ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎನ್.ಬಿ.ಪ್ರದೀಪ್‌ಕುಮಾರ್, ಅಖಿಲ ಭಾರವ ವೀರಶೈವ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಡಾ.ದರ್ಶನ್ ಕೆ.ಎಲ್, ಮಹಿಳಾ ಘಟಕ ಅಧ್ಯಕ್ಷೆ ಮಮತಾ ದಿವಾಕರ್, ವೀರಶೈವ ಲಿಂಗಾಯತ ಸೇವಾ ಸಮಿತಿ ಅಧ್ಯಕ್ಷ ದರ್ಶನ್‌ಮೈತ್ರಿ ಮಹಿಳಾ ಸಂಘದ ಅಧ್ಯಕ್ಷೆ ಶೈಲಾ ಶಿವಕುಮಾರ್, ಬಸವಸೇನೆ ಜಿಲ್ಲಾಧ್ಯಕ್ಷ ಕನ್ನಡ ಪ್ರಕಾಶ್, ಮುಖಂಡರಾದ ಸಿದ್ಧಲಿಂಗಮೂರ್ತಿ, ಜಯಪ್ರಕಾಶ್, ಷಡಕ್ಷರಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.
