ಸಾರಾಂಶ
ವಿಜ್ಞಾನ ಮತ್ತು ತಂತ್ರಜ್ಞಾನ ವೇಗವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ಇದರ ಸದ್ಭಳಕೆ ಅವಶ್ಯಕವಾಗಿದೆ ಎಂದು ವಿಜ್ಞಾನಿ ಡಾ.ವಿ.ಕೆ.ಅತ್ರೆ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ವಿಜ್ಞಾನ ಮತ್ತು ತಂತ್ರಜ್ಞಾನ ವೇಗವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ಇದರ ಸದ್ಭಳಕೆ ಅವಶ್ಯಕವಾಗಿದೆ ಎಂದು ವಿಜ್ಞಾನಿ ಡಾ.ವಿ.ಕೆ.ಅತ್ರೆ ಹೇಳಿದ್ದಾರೆ.ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯ, ಅಮೆರಿಕದ ಟೆಕ್ಸಾಸ್ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ಆಯೋಜಿಸಿದ್ದ ಐ.ಸಿ.ಎಂ.ಎ.ಎಂ.ಎಸ್ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ವೈರ್‌ಲೆಸ್ ತಂತ್ರಜ್ಞಾನದ ಸಹಾಯದಿಂದ ನಾವೆಲ್ಲರೂ ಇಂದು ದೇಶ-ವಿದೇಶಗಳಿಂದ ಸಂಪರ್ಕ ಸಾಧಿಸುವಂತಾಗಿದೆ. ಅದೇ ರೀತಿ ಸೂಪರ್ ಕಂಪ್ಯೂಟರ್ ಅಭಿವೃದ್ಧಿಯಾಗಿದೆ. ತಂತ್ರಜ್ಞಾನ ಬೆಳವಣಿಗೆ ಸಾಧಿಸುತ್ತಿರುವ ಹೊತ್ತಿನಲ್ಲಿ ಇದರಿಂದ ಸಮಸ್ಯೆ ಮತ್ತು ಅನುಕೂಲ ಎರಡೂ ಇದೆ. ನಾವು ಒಳ್ಳೆಯ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳಬೇಕು ಎಂದರು.ಗೋಕುಲ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಡಾ.ಎಂ.ಆರ್. ಜಯರಾಮ್ ಮಾತನಾಡಿ, ನಾವು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣ ನೀಡುವ ಉದ್ದೇಶದಿಂದ ಸ್ಕಿಲ್ ಲ್ಯಾಬ್ ತೆರೆದಿದ್ದೇವೆ. ಇದರಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆಯಬಹುದು. ಅಲ್ಲದೇ, ನಮ್ಮ ವಿವಿಯಲ್ಲಿ ಕೇಂದ್ರ ಸರ್ಕಾರ ಆಯೋಜಿತ ಸಾಕಷ್ಟು ಯೋಜನೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳ ಸಾಧನೆಗೆ ಸದಾ ಬೆಂಬಲ ನೀಡುತ್ತೇವೆ ಎಂದರು.ಟೆಕ್ಸಾಸ್ ಎ ಆ್ಯಂಡ್ ಎಂ ವಿಶ್ವವಿದ್ಯಾಲಯದ ಪ್ರೊ. ಜೆ.ಎನ್.ರೆಡ್ಡಿ, ಗೋಕುಲ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿಎಂ.ಆರ್. ರಾಮಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))