ಕೃಷಿ ಭೂಮಿ ಫಲವತ್ತತೆಯಿಂದ ಉತ್ತಮ ಇಳುವರಿ: ಡಾ.ಕೆ.ಟಿ.ಮೋಹನ್ ಕುಮಾರ್

| Published : May 05 2025, 12:46 AM IST

ಸಾರಾಂಶ

ರೈತರು ಉತ್ತಮ ಇಳುವರಿಯನ್ನು ಪಡೆಯಬೇಕಾದರೆ ಕೃಷಿ ಭೂಮಿ ಫಲವತ್ತತೆಯಿಂದ ಕೂಡಿರಬೇಕು ಎಂದು ಡಾ. ಕೆ.ಟಿ. ಮೋಹನ್‌ ಕುಮಾರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ರೈತರು ಉತ್ತಮ ಇಳುವರಿಯನ್ನು ಪಡೆಯಬೇಕಾದರೆ ಕೃಷಿ ಭೂಮಿ ಫಲವತ್ತತೆಯಿಂದ ಕೂಡಿರಬೇಕು ಎಂದು ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಮಣ್ಣುವಿಜ್ಞಾನಿ ಡಾ.ಕೆ.ಟಿ.ಮೋಹನ್ ಕುಮಾರ್ ಹೇಳಿದರು.

ಕೂರ್ಗ್ ಟ್ರೇಡಿಂಗ್ ಕಂಪನಿ ಲಿಮಿಟೆಡ್ ಹಾಗೂ ಕೋರಮಂಡಲ್ ಇಂಟರ್ನ್ಯಾಷನಲ್ ಲಿಮಿಟೆಡ್ ಇವರ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲುವಿನ ಬೆಳೆಗಾರರಿಗೆ ಆಯೋಜಿಸಲಾಗಿದ್ದ ಕಾಫಿ ಮತ್ತು ಕಾಳು ಮೆಣಸು ಕೃಷಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.

ರೈತರು ಕೃಷಿ ಮಾಡುವ ಮುನ್ನ ಮಣ್ಣು ಪರೀಕ್ಷೆ ಅಗತ್ಯಕ್ಕೆ ತಕ್ಕಂತೆ ಉತ್ತಮ ಗುಣಮಟ್ಟದ ರಸ ಗೊಬ್ಬರಗಳನ್ನು ಬಳಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವುದರಿಂದ ಬೆಳೆಗಳ ಇಳುವರಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆಯಲು ಸಾಧ್ಯ ಎಂದರು.

ನಾಪೋಕ್ಲು ಕೂರ್ಗ್ ಟ್ರೇಡಿಂಗ್ ಕಂಪನಿ ಲಿಮಿಟೆಡ್ ಮಾಲೀಕ ಮಹಮ್ಮದ್ ರಫಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರೈತರು ದೇಶದ ಬೆನ್ನೆಲುಬು ಎಂದ ಅವರು ರೈತರು ಕೃಷಿ ಚಟುವಟಿಕೆಗಳಲ್ಲಿ ಉತ್ತಮ ಇಳುವರಿ ಪಡೆಯಲು ಉತ್ತಮ ರಸ ಗೊಬ್ಬರಗಳ ಬಳಕೆ ಮಾಡಬೇಕಿದೆ ಎಂದರು. ವಕೀಲ ಅಬ್ದುಲ್ ರಿಯಾಜ್ ಕೋರಮಂಡಲ ಇಂಟರ್ನ್ಯಾಷನಲ್ ಲಿಮಿಟೆಡ್ ಕಂಪನಿಯ ವಿಭಾಗೀಯ ಬೇಸಾಯ ಶಾಸ್ತ್ರಜ್ಞ ರಮೇಶ್ ಕುಮಾರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೋರಮಂಡಲ್ ಇಂಟರ್ನ್ಯಾಷನಲ್ ಕಂಪನಿ ವತಿಯಿಂದ ಕೂರ್ಗ್ ಟ್ರೇಡಿಂಗ್ ಕಂಪನಿ ಮಾಲೀಕ ಮಹಮದ್ ರಫಿ ಹಾಗೂ ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಮೋಹನ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಬೆಳೆಗಾರರಾದ ಶೌಕತ್ ಆಲಿ, ಕಲ್ಯಾಟಂಡ ರಮೇಶ್ಚಂಗಪ್ಪ, ಲಿಯಾಕತ್ಆಲಿ, ಅಪ್ಪಚ್ಚಿರ ಸುರೇಶ್, ನಜೀರ್, ಹರೀಶ್ ಕೋರಮಂಡಲ ಇಂಟರ್ನ್ಯಾಷನಲ್ ಲಿಮಿಟೆಡ್ನ ಜಿಲ್ಲಾ ಮಾರುಕಟ್ಟೆ ವ್ಯವಸ್ಥಾಪಕ ಹರ್ಷ ಹೆಗಡೆ, ಬೇಸಾಯ ತಜ್ಞ ಡಾ.ರಾಜಶೇಖರ್, ಮೊಯ್ದು ಬೆಟಗೇರಿ, ಮೊಹಮದ್ ಕುಂಜಿಲ ಸೇರಿದಂತೆ ಬೆಳೆಗಾರರು ಭಾಗವಹಿಸಿದ್ದರು.