ಮಾಜಿ ಶಾಸಕ ದಿ.ಹೆಬ್ರಿ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್‌ ಭಂಡಾರಿ ಬ್ರಹ್ಮಾವರದ ಬಾರ್ಕೂರಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹಲವು ಸಂಶಯ ಮೂಡಿದ್ದು, ಸಮಗ್ರ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ಮನವಿ ಮಾಡಿದೆ.

ಕನ್ನಡಪ್ರಭ ವಾರ್ತೆ ಕಾರ್ಕಳ

ಶೀಘ್ರ ತನಿಖೆ ನಡೆಸುವಂತೆ ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮನವಿ ಸಲ್ಲಿಸಿದರು.

ಹೆಬ್ರಿ ಗೋಪಾಲ ಭಂಡಾರಿ ಅವರ ಪುತ್ರನ ಸಾವು ಅತ್ಯಂತ ನೋವು ತಂದಿದೆ. ಅವರ ಕುಟುಂಬ, ಆತ್ಮೀಯರು ಹಾಗೂ ಸಂಬಂಧಿಗಳಿಗೆ ಚಿಂತೆ ಹಾಗೂ ಅಘಾತವಾಗಿದೆ. ಸುದೀಪ್‌ ಭಂಡಾರಿ ಮೊಬೈಲ್‌ನ ಎಲ್ಲ ಸಂಪರ್ಕಗಳ ವಿವಿಧ ಮೂಲಗಳನ್ನು ಸಮಗ್ರ ತನಿಖೆ ನಡೆಸಬೇಕು. ಗೋಪಾಲ ಭಂಡಾರಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಶೀಘ್ರವಾಗಿ ನ್ಯಾಯ ದೊರಕಿಸಿಕೊಡುವಂತೆ ನೀರೆ ಕೃಷ್ಣ ಶೆಟ್ಟಿ ಮನವಿಯಲ್ಲಿ ಒತ್ತಾಯಿಸಿದ್ದಾರೆ.