ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿನಕುರಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಸಿ.ಎಸ್.ಗೋಪಾಲಗೌಡ, ಉಪಾಧ್ಯಕ್ಷರಾಗಿ ಸಿ.ಸುರೇಂದ್ರ ಬುಧವಾರ ಅವಿರೋಧವಾಗಿ ಆಯ್ಕೆಯಾದರು.ಸಂಘದ ನೂತನ ಆಡಳಿತ ಮಂಡಳಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆದು ಸಿ.ಎಸ್.ಗೋಪಾಲಗೌಡ, ಸಿ.ಸುರೇಂದ್ರರನ್ನು ಹೊರತುಪಡಿಸಿ ಉಳಿದ ಯಾವೊಬ್ಬ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಸಂಘದ ನೂತನ ಅಧ್ಯಕ್ಷ- ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದು ಚುನಾವಣಾಧಿಕಾರಿ ಆನಂದನಾಯ್ಕ ಘೋಷಿಸಿದರು.
ನೂತನ ಅಧ್ಯಕ್ಷರಾದ ಸಿ.ಎಸ್.ಗೋಪಾಲಗೌಡ, ಉಪಾಧ್ಯಕ್ಷ ಸಿ.ಸುರೇಂದ್ರ ಅವರನ್ನು ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್, ಜಿಪಂ ಮಾಜಿ ಸದಸ್ಯ ಸಿ.ಅಶೋಕ್ ಸೇರಿದಂತೆ ಸಂಘದ ಎಲ್ಲಾ ನಿರ್ದೇಶಕರು, ಮುಖಂಡರು ಅಭಿನಂದಿಸಿದರು.ಸಿ.ಎಸ್.ಗೋಪಾಲಗೌಡ ಮಾತನಾಡಿ, ನಮ್ಮ ನಾಯಕರು, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರ ಆಶೀರ್ವಾದದಿಂದ ಸಂಘದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಚಿನಕುರಳಿ ಸೊಸೈಟಿ ಜಿಲ್ಲೆಯ ಮಾದರಿ ಸಂಘವಾಗಿ ಕೆಲಸ ಮಾಡುತ್ತಿದೆ. ಸೂಪರ್ ಮಾರುಕಟ್ಟೆ, ಆಹಾರ, ಗೊಬ್ಬರು ಶಾಖೆಗಳನ್ನು ಅಭಿವೃದ್ಧಿ ಪಡಿಸುವ ಕೆಲಸ ಮಾಡುತ್ತೇನೆ. ಜತೆಗೆ ರೈತರಿಗೆ ಸಾಲ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಿಕೊಡುವ ಮೂಲಕ ಎಲ್ಲಾ ನಿರ್ದೇಶಕರ ಜತೆಗೂಡಿ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್, ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಸಂಘದ ನಿರ್ದೇಶಕರಾದ ಸಿ.ಎಂ.ಕಾಳೇಗೌಡ, ಕೆ.ಎ.ಸ್ವಾಮಿಗೌಡ, ಜಿ.ಕೆ.ಕುಮಾರ, ಕೆ.ವೈ.ಭವ್ಯ, ತಾಯಮ್ಮ, ರಾಮಕೃಷ್ಣೇಗೌಡ, ಕೆ.ಎಸ್.ಚಂದ್ರು, ಸಿಂಗ್ರಯ್ಯ, ಕಾರ್‍ಯದರ್ಶಿ ಕಾಂತರಾಜು, ಮುಖಂಡರಾದ ಸಿ.ಎಸ್.ಗಂಗಾಧರ್, ಸಿ.ಕೆ.ಅಂಕೇಗೌಡ, ಸಿ.ಪ್ರಕಾಶ್, ವಿಎಸ್‌ಎಸ್‌ಎನ್‌ಬಿ ಮಾಜಿ ಅಧ್ಯಕ್ಷರಾದ ಮಂಜುನಾಥ್, ಮೊಗ್ಗಣ್ಣೇಗೌಡ ಸೇರಿದಂತೆ ಗ್ರಾಪಂ ಸದಸ್ಯರು, ಮುಖಂಡರು ಭಾಗವಹಿಸಿದ್ದರು.