ಸಾರಾಂಶ
ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತುಳುನಾಡ ತುಡರ ಪರ್ಬ -2024 ರ ಅಂಗವಾಗಿ ಗೋವಿನ ಪೂಜೆಯ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿತುಳುನಾಡ ತುಡರ ಪರ್ಬ -2024 ರ ಅಂಗವಾಗಿ ಗೋವಿನ ಪೂಜೆಯ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು.
ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಟಿ.ಕೆ ಮಧುಸೂದನ ಆಚಾರ್ಯ ಗೋವುಗಳಿಗೆ ವಸ್ತ್ರ ಹೊದೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಗೀತಾ ಗಣೇಶ್ ವಹಿಸಿದ್ದರು.ಸಂಸ್ಥೆಯ ಮಹಿಳಾ ಕಾರ್ಯಾಧ್ಯಕ್ಷೆ ಹಾಗೂ ಸದಸ್ಯೆಯರು ಗೋವುಗಳಿಗೆ ಅರಸಿನ, ಕುಂಕುಮವಿಟ್ಟು, ಆರತಿ ಎತ್ತಿ, ಹಾಡುಗಳನ್ನು ಹಾಡಿದರು. ನಂತರ ಬಾಳೆಹಣ್ಣು ತಿನ್ನಿಸಿ ಗೋಪೂಜೆ ನೆರವೇರಿಸಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ಕುಂದರ್ ಗೋವಿನ ಪೂಜೆಯ ವಿಧಾನಗಳನ್ನು ತಿಳಿಸಿದರು. ಈ ಸಂದರ್ಭ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಪೂಜಾರಿ, ಗ್ರಾಮದ ಹಿರಿಯ ಕೃಷಿಕರಾದ ಜಯ ಶೆಟ್ಟಿ ಮೂಡುಮನೆ, ಸಂಸ್ಥೆಯ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್, ಅಧ್ಯಕ್ಷ ದೀಪಕ್ ಸುವರ್ಣ, ಮಹಿಳಾ ಕಾರ್ಯಾಧ್ಯಕ್ಷೆ ಯಶೋಧ ದೇವಾಡಿಗ, ಪಡುಪಣಂಬೂರು ಗ್ರಾಮ ಪಂಚಾಯಿತಿ ಸದಸ್ಯ ಮೋಹನ್ ದಾಸ್, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಯೋಗೀಶ್ ಕೋಟ್ಯಾನ್, ಸಾಮಾಜಿಕ ಕಾರ್ಯಕರ್ತ ಧರ್ಮಾನಂದ ಶೆಟ್ಟಿಗಾರ್, ಕ್ಲಬ್ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಸುನಿಲ್ ದೇವಾಡಿಗ ಮತ್ತಿತರರಿದ್ದರು.ಅಧ್ಯಕ್ಷ ದೀಪಕ್ ಸುವರ್ಣ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಕಾರ್ಯದರ್ಶಿ ಚಂದ್ರ ಸುವರ್ಣ ವಂದಿಸಿದರು, ಸಾಂಸ್ಕೃತಿಕ ಕಾರ್ಯದರ್ಶಿ ಗೀತಾ ಸದಾನಂದ ಕಾರ್ಯಕ್ರಮ ನಿರೂಪಿಸಿದರು.