ಫೆಬ್ರವರಿಯಲ್ಲಿ ಗೊರೂರು ಯೋಗಾನರಸಿಂಹಸ್ವಾಮಿ ಜಾತ್ರೆ

| Published : Jan 06 2025, 01:01 AM IST

ಫೆಬ್ರವರಿಯಲ್ಲಿ ಗೊರೂರು ಯೋಗಾನರಸಿಂಹಸ್ವಾಮಿ ಜಾತ್ರೆ
Share this Article
  • FB
  • TW
  • Linkdin
  • Email

ಸಾರಾಂಶ

ಫೆ.4ರಂದು ಗೊರೂರು ಗ್ರಾಮದಲ್ಲಿ ಯೋಗನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಅದೇ ದಿನ ಮಧ್ಯಾಹ್ನ ರಥೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗೊರೂರು ಸುತ್ತ ಮುತ್ತಲಿನ ಗ್ರಾಮಸ್ಥರು, ವಿವಿಧ ರಾಜಕೀಯ ಮುಖಂಡರು, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಶಾಸಕ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಆಲೂರು

ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಟ್ಟಾಯ ಹೋಬಳಿಯ ಗೊರೂರು ಗ್ರಾಮದ ಹೇಮಾವತಿ ದಡದಲ್ಲಿರುವ ಶ್ರೀ ಯೋಗಾ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ಸಂಬಂಧ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಫೆ.4ರಂದು ಗೊರೂರು ಗ್ರಾಮದಲ್ಲಿ ಯೋಗನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಅದೇ ದಿನ ಮಧ್ಯಾಹ್ನ ರಥೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗೊರೂರು ಸುತ್ತ ಮುತ್ತಲಿನ ಗ್ರಾಮಸ್ಥರು, ವಿವಿಧ ರಾಜಕೀಯ ಮುಖಂಡರು, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಶಾಸಕ ಮನವಿ ಮಾಡಿದರು.

ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಮಾತನಾಡಿ, ಪ್ರತಿವರ್ಷ ನಡೆಯುವ ವೈಭವದ ಜಾತ್ರೆಗೆ ಹೊರರಾಜ್ಯ ಹಾಗೂ ಹೊರದೇಶಗಳಿಂದ ಭಕ್ತಾಧಿಗಳು ಆಗಮಿಸಲಿದ್ದು, ಅವರುಗಳಿಗೆ ಮೂಲಭೂತ ಸೌಕರ್ಯ,ಪಾರ್ಕಿಂಗ್ ವ್ಯವಸ್ಥೆ, ವಿದ್ಯುತ್ ದೀಪಗಳು, ಜನಸಂದಣಿ ನಿಯಂತ್ರಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದ್ದು, ಜನ ಸ್ನಾನಕ್ಕೆ ಇಳಿಯುವಲ್ಲಿ ಜಾಗ್ರತೆ ವಹಿಸುವುದು, ಮಕ್ಕಳು ಪೋಷಕರಿಂದ ತಪ್ಪಿಸಿಕೊಳ್ಳದಂತೆ ಮುಂಜಾಗ್ರತೆ ವಹಿಸಬೇಕೆಂದು ಸಲಹೆ ನೀಡಿದರು.

ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಜಾತ್ರಾ ಮಹೋತ್ಸವ ಪ್ರಾರಂಭ ದಿನದಿಂದ ಮುಗಿಯುವ ತನಕ ವಹಿಸಿರುವ ಜವಾಬ್ದಾರಿಯನ್ನು ಚಾಚು ತಪ್ಪದೆ ಪಾಲಿಸಬೇಕು. ಸರ್ಕಾರ ದೇವಾಲಯದ ಅಭಿವೃದ್ಧಿಗೆ 2 ಕೋಟಿ ರು. ಹಣ ಮಿಸಲಿಟ್ಟಿದ್ದು ಹಣ ಬಿಡುಗಡೆಗೆ ಕೆಲವು ಸರ್ಕಾರದ ನಿಯಮಗಳಿವೆ ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಅತಿಕ್ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಸದ್ಯದಲ್ಲೇ ಹಣ ಬಿಡುಗಡೆ ಯಾಗಲಿದೇ ದೇವಾಲಯ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗರಾಜು, ಸದಸ್ಯರಾದ ಬಂಗಾರಿಗೌಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಟರಾಜು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜಗದೀಶ್ ರಾಮಘಟ್ಟ, ಬಿಜೆಪಿ ಮುಖಂಡರಾದ ಹರೀಶ್ ಕೋಡರಾಮನಹಳ್ಳಿ,ನಿತಿನ್ ಉಡುವಾರೆ, ಜೆಡಿಎಸ್ ಮುಖಂಡ ಹೇಮರಾಜ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.