ಸಾರಾಂಶ
ಅಗತಗೌಡನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ಶಿವನಾಗಮ್ಮ ನಾಗಾಚಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು.
ಗುಂಡ್ಲುಪೇಟೆ: ತಾಲೂಕಿನ ಅಗತಗೌಡನಹಳ್ಳಿ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಗೌರಮ್ಮ ಮಹದೇವಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಗತಗೌಡನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ಶಿವನಾಗಮ್ಮ ನಾಗಾಚಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದು, ಗೌರಮ್ಮ ಹೊರತು ಪಡಿಸಿ ಇತರೆ ಸದಸ್ಯರು ನಾಮಪತ್ರ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಗಳೂ ಆದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ ಗೌರಮ್ಮ ಆಯ್ಕೆ ಘೋಷಿಸಿದರು. ಗ್ರಾಪಂ ಮಾಜಿ ಅಧ್ಯಕ್ಷರಾದ ಮಾದೇಶ, ಮಾಜಿ ಉಪಾಧ್ಯಕ್ಷರಾದ ಮಹದೇವಸ್ವಾಮಿ, ಶಿವನಾಗಮ್ಮ ನಾಗಾಚಾರಿ ಸೇರಿದಂತೆ ಗ್ರಾಪಂ ಸದಸ್ಯರು ಹಾಗೂ ಪಿಡಿಒ ನವೀನ್ ಮಲ್ಹೋತ್ರ ಇದ್ದರು.