ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಮನವಿ

| Published : Jul 13 2024, 01:35 AM IST

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸಿ ಶೀಘ್ರ ಜಾರಿಗೊಳಿಸಲು, ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ, ತಾಲೂಕಿನ ನೌಕರರರು ಶಾಸಕ ‌ಎಚ್ ಕೆ ಸುರೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರು ಸರ್ಕಾರದ ಮುಂದಿರುವ ರಾಜ್ಯ ಸರ್ಕಾರಿ ನೌಕರರ 3 ನ್ಯಾಯಯುತ ಬೇಡಿಕೆಗಳನ್ನು ಸರ್ಕಾರಿ ಆದೇಶ ಹೊರಡಿಸಿ ಶೀಘ್ರ ಜಾರಿಗೊಳಿಸಲು, ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ, ತಾಲೂಕಿನ ನೌಕರರರು ಶಾಸಕ ‌ಎಚ್ ಕೆ ಸುರೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರದಲ್ಲಿ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ, ಆದೇಶ ಹೊರಡಿಸುವುದು, ಎನ್.ಪಿ.ಎಸ್ ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು, ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆ.ವಿ.ಎಸ್.ಎಸ್) ಅನುಷ್ಠಾನಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ విಳಂಬ ಮಾಡುತ್ತಿದ್ದು, ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡಬೇಕು. ಕಾರ್ಯಭಾರವನ್ನೂ ಸಹ ನಿರ್ವಹಿಸುತ್ತಿರುವುದರಿಂದ ನೌಕರರು ಒತ್ತಡಕ್ಕೆ ಸಿಲುಕಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಅವಶ್ಯವಿರುವ ಚಿಕತ್ಸೆ ಪಡೆಯುವಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಅನುಷ್ಠಾನಾಧಿಕಾರಿಗಳೂ ತಾಂತ್ರಿಕ ಹಾಗೂ ಇನ್ನಿತರ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದಾರೆ.

ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ತನ್ನ ಪೂರ್ಣ ಪ್ರಮಾಣದ ವರದಿಯನ್ನು ಸಲ್ಲಿಸಿ ನಾಲ್ಕು ತಿಂಗಳು ಪೂರ್ಣಗೊಂಡರೂ ಮುಖ್ಯಮಂತ್ರಿಗಳು ಸರ್ಕಾರಿ ನೌಕರರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ ವೇತನ ಆಯೋಗದ ವರದಿಯನ್ನು ಅನುಷ್ಠಾನಗೊಳಿಸದೇ ಇರುವುದರಿಂದ ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಸಹಜವಾಗಿಯೇ ವೇತನ ಪರಿಷ್ಕರಣೆ ವಿಳಂಬವಾಗುವುದೆಂಬ ಆತಂಕಕ್ಕೆ ಒಳಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರ ಹಾಗೂ ಸಂಘಟನೆಯ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ಮುಂದಿರುವ ರಾಜ್ಯ ಸರ್ಕಾರಿ ನೌಕರರ 3 ನ್ಯಾಯಯುತ ಬೇಡಿಕೆಗಳನ್ನು ಸರ್ಕಾರಿ ಆದೇಶ ಹೊರಡಿಸಿ ಶೀಘ್ರ ಜಾರಿಗೊಳಿಸಲು, ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ, ತಾಲೂಕಿನ ನೌಕರರರು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ‌ಕ್ಷೇತ್ರ ಶಿಕ್ಷಣಾಧಿಕಾರಿ ಮುಳ್ಳಯ್ಯನವರು, ಜಿಲ್ಲಾಧ್ಯಕ್ಷರು ಕೃಷ್ಣೆಗೌಡ ತಾಲೂಕು ಅಧ್ಯಕ್ಷರು ಮಂಜುನಾಥ್ ಆರ್, ಕಾರ್ಯದರ್ಶಿ ಕೇಶವ ಕಿರಣ್, ಉಪಾಧ್ಯಕ್ಷ ಪೂರ್ಣೇಶ್ ಭಾನುಪ್ರಕಾಶ್, ಸಂಘಟನಾ ಕಾರ್ಯದರ್ಶಿ ಶುಭಾಷ್, ವೆಂಕಟರಾಮ ಖಜಾಂಚಿ ಸಂತೋಷ್, ರಮೇಶ್, ಮೋಕ್ಷ, ಧನಂಜಯ್, ಶಿಕ್ಷಕರಾದ ಮಂಜಯ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಹೇಮಂತ್, ರವಿ ನಾಯಕ್, ಮೋಹನ್, ಶಿಕ್ಷಕರ ಸಂಘದ ಭದ್ರೇಗೌಡ, ಕುಮಾರಸ್ವಾಮಿ, ರೂಪ, ಮೋಸಂ ತಾಜ್, ಸುಧಾಮಣಿ ಇತರೆ ಎಲ್ಲಾ ಸಂಘದ ನಿರ್ದೇಶಕರು, ಎಲ್ಲ ಇಲಾಖೆಯ ನೌಕರರು ಹಾಜರಿದ್ದರು.