ಬಸವಾದಿ ಶರಣರ ಆಶಯದಂತೆ ಸರ್ಕಾರದ ಆಡಳಿತ

| Published : Feb 18 2024, 01:32 AM IST

ಸಾರಾಂಶ

ಎಂ.ಬಿ.ಪಾಟೀಲ, ಸಚಿವರು.ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಬಸವಣ್ಣರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್‌ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಬಸವಣ್ಣರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್‌ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯತಿಯಲ್ಲಿ ಶನಿವಾರ ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬಳಿ ಈ ಬಗ್ಗೆ ಮನವಿ ಸಲ್ಲಿಸಿದ ಕ್ಷಣವೇ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಲು ಒಪ್ಪಿಗೆ ಸೂಚಿಸಿದರು ಎಂದು ತಿಳಿಸಿದರು.

ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ, ಬಸವಣ್ಣ ನಮ್ಮ ಜಿಲ್ಲೆಯವರು ಅವರ ಆದರ್ಶ-ವಿಚಾರಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು. ಬಸವಾದಿ ಶರಣರ ವಚನಗಳನ್ನು ಜನತೆಗೆ ಮುಟ್ಟಿಸಿ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಟಿ ಭೂಬಾಲನ್ ಮಾತನಾಡಿದರು, ಮೇಯರ್ ಮಹೇಜಬೀನ್ ಹೊರ್ತಿ, ಉಪಮೇಯರ್ ದಿನೇಶ ಹಳ್ಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಸಿಇಒ ರಿಷಿ ಆನಂದ, ಪಾಲಿಕೆ ಆಯುಕ್ತ ಬದ್ರುದ್ದಿನ್ ಸೌದಾಗರ್ ಸೇರಿದಂತ ಅಧಿಕಾರಿಗಳು ಇದ್ದರು.

12ನೇ ಶತಮಾನದಲ್ಲಿ ಬಸವಣ್ಣನವರು ಪ್ರತಿಪಾದಿಸಿದ ಜಾತಿರಹಿತ ಸಮಾಜ, ಕಾಯಕದ ಮಹತ್ವ, ವರ್ಗರಹಿತ ಸಮಾಜದ ಕನಸು ಕಂಡು ನಮ್ಮ ನಡೆನುಡಿಗಳಲ್ಲಿ ಭಿನ್ನತೆ ಇರಬಾರದು ಎಂಬುವುದನ್ನು ಬಸವಾದಿ ಪ್ರಮಥರು ವಚನಗಳ ಮೂಲಕ ಸಾರಿದ್ದಾರೆ. ಅವರು ಪ್ರತಿಪಾದಿಸಿದ ಉದಾತ್ತ ತತ್ವಗಳು ಎಂದೆಂದಿಗೂ ಪ್ರಸ್ತುತವಾಗಿದ್ದು, ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರದಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ನಮೂದಿಸಿ ಅಳವಡಿಸಲಾಗುತ್ತಿದೆ.