ರಟ್ಟೀಹಳ್ಳಿ: ಕನ್ನಡ ನಾಡು-ನುಡಿ, ಭಾಷೆ, ನೆಲ, ಜಲ, ಕನ್ನಡಿಗರ ಸ್ವಾಭಿಮಾನ ಕಾಪಾಡುವಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸರ್ಕಾರ ಸದಾ ಬದ್ಧ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ 71ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದಿನ ಕರ್ನಾಟಕಕ್ಕಿಂತಲೂ ಇಂದು ಸಾಕಷ್ಟು ಅಭಿವೃದ್ಧಿಯಾಗಿದ್ದು ಸಾಹಿತ್ಯ ಕ್ಷೇತ್ರ, ಶಿಕ್ಷಣ, ಕ್ರೀಡಾ ಕ್ಷೇತ್ರ, ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸದಾ ಮುಂದಿದ್ದು, ಅದನ್ನು ಉಳಿಸಿಕೊಂಡು ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ನನ್ನ ಆಡಳಿತ ವ್ಯವಸ್ಥೆಯಲ್ಲಿ ಪ್ರಾಥಮಿಕ ಹಂತದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತ ನಾಣ್ಣುಡಿಯಂತೆ ಪ್ರಾಥಮಿಕ ಹಂತದಲ್ಲಿ ಗುಣ ಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯಗಳನ್ನು ನೀಡಿದರೆ ಮುಂಬರುವ ಎಲ್ಲ ಹಂತಗಳಲ್ಲಿ ಮಕ್ಕಳ ಜ್ಞಾನ ವೃದ್ಧಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದು ಕಾರಣ ಆ ನಿಟ್ಟಿನಲ್ಲಿ ಸರಕಾರ ಪ್ರಸ್ತುತ 17 ಕೆಪಿಎಸ್ ಶಾಲೆಗಳನ್ನು ನೀಡಿದೆ ಎಂದರು.

ತಹಸೀಲ್ದಾರ ಜಿ. ಜಯರಾಮ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಹಿಂದೆ ಮೈಸೂರು ರಾಜ್ಯವೆಂದು ಹೆಸರು ಮಾಡಿ ತದ ನಂತರ 1973ರಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿದ ನ.1 ಅನ್ನು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತಿದೆ, ಕನ್ನಡವನ್ನು ಕೇವಲ ಒಂದು ತಿಂಗಳು ಆಚರಿಸದರೆ ಸಾಲದು, ಕನ್ನಡ ಭಾಷೆ ನಮ್ಮ ಹಾಸುಹೊಕ್ಕಾಗಬೇಕು ಎಂದರು.

ಕನ್ನಡ ನಾಡಿನಲ್ಲಿ ಅನೇಕ ಭಾಷಿಕರು, ನೆರೆ ರಾಜ್ಯದ ಜನರಿಗೆ ಅನ್ನ ನೀಡುವ ನಾಡಾಗಿದ್ದು ಇಲ್ಲಿ ನೆಲೆಸಿರುವ ಅನ್ಯ ಭಾಷಿಕರು ಕನ್ನಡವನ್ನು ಹೆಚ್ಚು ಪ್ರೀತಿಸುತ್ತಾರೆ. ಆದರೆ ನಮ್ಮ ಕನ್ನಡ ನಾಡಿನಲ್ಲಿ ಹುಟ್ಟಿದ ಜನರು ಕನ್ನಡ ಮಾತನಾಡಲು ಹಿಂಜರಿಯುತ್ತಿರುವುದು ಇದೊಂದು ಕೆಟ್ಟ ಬೆಳವಣಿಗೆಯಾಗಿದ್ದು ಇದಕ್ಕೆ ಕಡಿವಾಣ ಹಾಕಿ ತಮ್ಮ ತಮ್ಮ ಮನೆಯಲ್ಲಿ ಯಾವ ಭಾಷೆಯನ್ನಾದರೂ ಮಾತನಾಡಲಿ. ಮನೆಯಿಂದ ಹೊರ ಬಂದ ತಕ್ಷಣ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಆಗ ಮಾತ್ರ ನಮ್ಮ ಮಾತೃ ಭಾಷೆಯನ್ನು ಉಳಿಸಿಕೊಂಡು ಬೆಳೆಸುವಲ್ಲಿ ಸಾಧ್ಯವಾಗುವುದು ಎಂದರು.


ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಮನರಂಜನೆ ಕಾರ್ಯಕ್ರಮಗಳು ಜರುಗಿದವು. ಉತ್ತಮ ಪ್ರದರ್ಶನ ನೀಡಿದ ಎಲ್ಲ ವಿದ್ಯಾರ್ಥಿಗಳಿಗೆ ತಾಲೂಕಾಡಳಿತ ವತಿಯಿಂದ ಪ್ರಶಸ್ತಿ ಪತ್ರ ನೀಡುವ ಮೂಲಕ ಅವರನ್ನು ಪ್ರೋತ್ಸಾಹಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಸುರೇಶಕುಮಾರ, ಸಿಪಿಐ ಮಂಜುನಾಥ ಪಂಡಿತ, ಪಿಎಸ್‌ಐ ಚಂದ್ರಶೇಖರ ವಿಭೂತಿಮಠ, ಪಟ್ಟಣ ಪಂಚಾಯತ್ ಸದಸ್ಯೆ ಲಲಿತಾ ಚನ್ನಗೌಡ್ರ, ಅಕ್ಷರ ದಾಸೋಹ ಅಧಿಕಾರಿ ಎಚ್.ಎಚ್. ಜಾಡರ, ಎಸ್‌ಡಿಎಂಸಿ ಅಧ್ಯಕ್ಷ ರಮೇಶ ತಳವಾರ, ಮಂಜು ಅಸ್ವಾಲಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಂತೋಷ ಚಂದ್ರಕೇರ, ಸಾಹಿತ್ಯ ಪರಿಷತ್ ತಾಲೂಕಪ ಅಧ್ಯಕ್ಷ ಎಂ.ಸಿ. ತುಮ್ಮಿನಕಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಕರಿಯಪ್ಪ ಕೊರವರ, ವಿಜಯ ಅಂಗಡಿ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ತಾಲೂಕಾಧ್ಯಕ್ಷ ಇರಫಾನ್ ಜಡದಿ, ವಿಠಲ್ ನಾಮದೇವ, ಹನಮಂತಪ್ಪ ಪರೀಟ, ಪ್ರವೀಣ ಉಜ್ಜಕ್ಕಳವರ ಮುಂತಾದವರು ಇದ್ದರು.

ಕರ್ನಾಟಕ ರಕ್ಷಣಾ ವೇದಿಕೆ: ಪಟ್ಟಣ ಹಳೇ ಬಸ್ಟ್ಯಾಂಡ್ ಸರ್ಕಲ್‍ನಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಉದ್ಘಾನೆಯನ್ನು ತಾಲೂಕಾಧ್ಯಕ್ಷ ಕರಿಯಪ್ಪ ಕೊರವೇರ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಕನ್ನಡ ನಾಡು, ನುಡಿ, ಜಲ ಭಾಷೆಗೆ ಧಕ್ಕೆಯಾದ ಸಂದರ್ಭದಲ್ಲಿ ಮೊದಲು ಹೋರಾಟಕ್ಕೆ ಇಳಿಯುವುದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಎಂದು ಹೇಳಿಕೋಳ್ಳಲು ಹೆಮ್ಮೆ ಎನಿಸುತ್ತದೆ. ಆ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ನೇತೃತ್ವದಲ್ಲಿ ಯಾವುದೇ ಹೋರಾಟಕ್ಕೂ ಸಿದ್ಧ ಎಂದರು.

ಮನೋಜ್ ಗೋಣೆಪ್ಪನವರ, ರವಿ ಮುಲಿಮನಿ, ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಶಿವಕುಮಾರ ಉಪ್ಪಾರ, ಸದಸ್ಯ ಸರ್ಫರಾಜ ಮಾಸೂರ, ಮಕ್ಬೂಲ್‍ಸಾಬ್ ಮುಲ್ಲಾ, ಚಂದ್ರಶೇಖರ ಕಾಯ್ಕದ ಮುಂತಾದವರು ಇದ್ದರು.

ಪಟ್ಟಣ ಪಂಚಾಯತ್: ಪಟ್ಟಣ ಪಂಚಾಯತ್ ಆವರಣದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ ಧ್ವಜಾರೋಹಣ ನೆರವೇರಿಸಿದರು.

ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಂತೋಷ ಚಂದ್ರಕೇರ, ಉಪಾಧ್ಯಕ್ಷ ಶಿವಕುಮಾರ ಉಪ್ಪಾರ, ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಆಡಿನವರ, ವೀರನಗೌಡ ಪ್ಯಾಟಿಗೌಡ್ರ, ರವಿ ಹದಡೇರ, ಪಿಡಿ ಬಸನಗೌಡ್ರ, ಸರ್ಫರಾಜ ಮಾಸೂರ, ಬಸವರಾಜ ಕಟ್ಟಿಮನಿ ಹಾಗೂ ಪಪಂ ನೌಕರರು, ಸಿಬ್ಬಂದಿ ಇದ್ದರು.