ಟೈಲರ್ಸ್‌ ಬೇಡಿಕೆಗಳನ್ನು ಸರ್ಕಾರ, ಜನಪ್ರತಿನಿಧಿಗಳು ಆಲಿಸಬೇಕು: ಆನಂದ ಕುಂದರ್‌

| Published : Jul 15 2025, 11:45 PM IST

ಟೈಲರ್ಸ್‌ ಬೇಡಿಕೆಗಳನ್ನು ಸರ್ಕಾರ, ಜನಪ್ರತಿನಿಧಿಗಳು ಆಲಿಸಬೇಕು: ಆನಂದ ಕುಂದರ್‌
Share this Article
  • FB
  • TW
  • Linkdin
  • Email

ಸಾರಾಂಶ

ಕೋಟ ಸಿ.ಎ. ಬ್ಯಾಂಕ್‌ನ ಬಿ.ಸಿ.ಹೊಳ್ಳ ಸಭಾಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ ಮಂಗಳೂರು ಇದರ ಕೋಟ ಮತ್ತು ಸಾಲಿಗ್ರಾಮ ವಲಯ ಸಮಿತಿಯ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಮನುಕುಲದ ಸೌಂದರ್ಯ ಹೆಚ್ಚಿಸುವಲ್ಲಿ ಟೈಲರ್ಸ್‌ಗಳ ಪಾತ್ರ ಬಹುಮುಖ್ಯವಾದದ್ದು, ಅಂತಹ ಟೈಲರ್ಸ್‌ಗಳ ಬೇಡಿಕೆಗಳನ್ನು ಸರ್ಕಾರ, ಜನಪ್ರತಿನಿಧಿಗಳು ಆಲಿಸಬೇಕಾಗಿದೆ ಎಂದು ಕೋಟ ಅಮೃತೇಶ್ವರೀ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿನ ಕೋಟ ಸಿ.ಎ. ಬ್ಯಾಂಕ್‌ನ ಬಿ.ಸಿ.ಹೊಳ್ಳ ಸಭಾಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ ಮಂಗಳೂರು ಇದರ ಕೋಟ ಮತ್ತು ಸಾಲಿಗ್ರಾಮ ವಲಯ ಸಮಿತಿಯ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸಭೆಯ ಅಧ್ಯಕ್ಷತೆಯನ್ನು ಸಂಘದ ಕೋಟ ಮತ್ತು ಸಾಲಿಗ್ರಾಮ ವಲಯ ಸಮಿತಿ ಅಧ್ಯಕ್ಷ ಕೃಷ್ಣ ದೇವಾಡಿಗ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ತೆಕ್ಕಟ್ಟೆ ಉದ್ಯಮಿ ಅನಂತ ನಾಯಕ್, ಸಂಘದ ರಾಜ್ಯ ಸಮಿತಿಯ ಕೋಶಾಧಿಕಾರಿ ಕೆ. ರಾಮಚಂದ್ರ, ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಗುರುರಾಜ್ ಎಂ. ಶೆಟ್ಟಿ, ಉಪಾಧ್ಯಕ್ಷೆ ಗೌರಿ ವಿ. ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಕೋಟ್ಯಾನ್, ಉದ್ಯಮಿ ಮಾಧವ ಪೈ ಸಾಲಿಗ್ರಾಮ, ಕ್ಷೇತ್ರ ಸಮಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಜತ್ತನ್, ಕೋಟ ಸಾಲಿಗ್ರಾಮ ವಲಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ ಪೂಜಾರಿ, ಕೋಶಾಧಿಕಾರಿ ರಮೇಶ ಪೂಜಾರಿ ಉಪಸ್ಥಿತರಿದ್ದರು.ಬ್ರಹ್ಮಾವರ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಅವಿನಾಶ್ ಮರಕಾಲ ಸ್ವಾಗತಿಸಿದರು, ಅಧ್ಯಕ್ಷ ಗಣೇಶ್ ಪೂಜಾರಿ ಪ್ರಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಶಿಕ್ಷಕ ಸಂತೋಷ್ ಕುಮಾರ್ ಕೋಟ ನಿರೂಪಿಸಿ ವಂದಿಸಿದರು.