ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರಿ ಕಾಲೇಜು ಹೆಸರುವಾಸಿ

| Published : Jun 27 2025, 12:48 AM IST

ಸಾರಾಂಶ

ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಕಾಲೇಜಿನಲ್ಲಿ ಉತ್ತಮ ಉಪನ್ಯಾಸಕರಿದ್ದಾರೆ ವಿದ್ಯಾರ್ಥಿಗಳು ಸರ್ಕಾರಿ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕ ಮಟ್ಟವನ್ನ ಹೆಚ್ಚಿಸಿಕೊಳ್ಳಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಕಾಲೇಜಿನಲ್ಲಿ ಉತ್ತಮ ಉಪನ್ಯಾಸಕರಿದ್ದಾರೆ ವಿದ್ಯಾರ್ಥಿಗಳು ಸರ್ಕಾರಿ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕ ಮಟ್ಟವನ್ನ ಹೆಚ್ಚಿಸಿಕೊಳ್ಳಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೪-೨೫ನೇ ಸಾಲಿನ ಶೈಕ್ಷಣಿಕ ಕಾರ್ಯ ಚಟುವಟಿಕೆ ಸಮಾರೂಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಶಿರಾ ತಾಲೂಕು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿಯೂ ಶಿರಾ ದೇಶದಲ್ಲಿ ಗುರುತಿಸುವ ಮಟ್ಟಕ್ಕೆ ಅಭಿವೃದ್ಧಿಯಾಗಿದೆ ಎಂದರು. ತುಮಕೂರು ಸರ್ಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳು ನಿಮ್ಮ ಕಲಿಕೆಯ ಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಒಳ್ಳೆಯ ಭವಿಷ್ಯದ ಪ್ರಜೆಗಳಾಗಬೇಕೆಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಿ ಚಂದ್ರಪ್ಪ ವಹಿಸಿದ್ದರು. ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮದ್, ಪ್ರಾಧ್ಯಾಪಕರಾದ ಡಾ. ಎಬಿ ಬಾಳಪ್ಪ, ಪ್ರಭಾಸ್ ಪಂಡಿತ್, ಶಿರಾ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುಳಿಗೇನಹಳ್ಳಿ ನಾಗರಾಜ್, ಸಿಡಿಸಿ ಸದಸ್ಯರಾದ ದೇವರಾಜು, ಉಪನ್ಯಾಸಕರಗಳಾದ ಡಾ. ಹೊನ್ನಾಂಜನೇಯ, ಎನ್ ನಾಗರಾಜು, ಸುಕನ್ಯಾ, ಗಂಗಾಧರ, ತಿಮ್ಮರಾಜು, ಗುಂಡಣ್ಣ, ವ್ಯವಸ್ಥಾಪಕರಾದ ಶ್ರೀನಿವಾಸ್, ತಿಪ್ಪೇಸ್ವಾಮಿ, ಸಿದ್ದಗಂಗಯ್ಯ, ರಂಗನಾಥ, ಡಾ. ಕುಮಾರ, ವನಿತಾ, ಮಾಗೋಡು ಶ್ರೀರಂಗಪ್ಪ ಹಾಜರಿದ್ದರು.