ಗಂಗಾವತಿ: ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ಶುಕ್ರವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ವರ್ಷ ಮಳೆ ಬರುತ್ತಿಲ್ಲ, ಇದರಿಂದ ಭದ್ರಾ ಜಲಾಶಯ ಭರ್ತಿಯಾಗದೆ ಇರುವುದರಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬರುತ್ತಿಲ್ಲ. ಈ ಕಾರಣಕ್ಕೆ ಸರ್ಕಾರ ಪ್ರಸ್ತುತ ಬೆಳೆಗೆ ನೀರು ಅನುಮಾನ ಎಂದು ಪ್ರಕಟಿಸಿದೆ. ಒಂದು ವೇಳೆ ಸಮರ್ಪಕವಾಗಿ ನೀರು ಬಂದು ಜಲಾಶಯಕ್ಕೆ ನೀರು ಸಂಗ್ರಹವಾದರೆ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಬಿಡಲಾಗುತ್ತದೆ ಎಂದರು.ಜಲಾಶಯದಲ್ಲಿ 35 ಟಿಎಂಸಿ ಹೂಳು ತುಂಬಿದ್ದರಿಂದ ಪರ್ಯಾಯವಾಗಿ ಜಿಲ್ಲೆಯ ನವಲಿ ಗ್ರಾಮದ ಬಳಿ 35 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಸಮತೋಲನ ಜಲಾಶಯ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಚರ್ಚೆ ಮಾಡುತ್ತಿದ್ದಾರೆ ಎಂದರು.
ವೆಂಕಟೇಶ ಕುಲಕರ್ಣಿ, ಚಂದನಾ, ವಕೀಲ ಸುಭಾಸ್, ಟಿಎಂಪಿಸಿಎಂಸ್ ಅದ್ಯಕ್ಷ ಚೆನ್ನಪ್ಪ ಮಳಗಿ, ಶ್ರೀನಿವಾಸ ಕುಲಕರ್ಣಿ, ರಾಘವೇಂದ್ರ ಕುಲಕರ್ಣಿ, ನಿಖಿಲ್, ವಿಷ್ಣು ಪ್ರಸಾದ ಉಪಸ್ಥಿತರಿದ್ದರು.