ನಾಡಿನ ಜನರ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಮೂಲಕ ರಾಜ್ಯವನ್ನು ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯಲು ಸಂಕಲ್ಪ ಮಾಡಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುನಾಡಿನ ಜನರ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಮೂಲಕ ರಾಜ್ಯವನ್ನು ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯಲು ಸಂಕಲ್ಪ ಮಾಡಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ರಾಜ್ಯದ ಬಡಜನರ ಏಳ್ಗೆಗಾಗಿ ಹಲವಾರು ನೂತನ ಕಾರ್ಯುಕ್ರಮಗಳನ್ನು ರೂಪಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು.

ಗಣತಂತ್ರ ವ್ಯವಸ್ಥೆಯಲ್ಲಿ ನಾವಿದ್ದೇವೆ. ಸಂವಿಧಾನವೇ ನಮ್ಮ ಧರ್ಮ ಎಂಬುದನ್ನು ನಾವೆಂದೂ ಮರೆಯಬಾರದು. ರಾಷ್ಟ್ರಪಿತ ಮಹಾತ್ಮಗಾಂಧೀಜಿ ಸೇರಿದಂತೆ ಹಲವಾರು ಮಹಾನ್ ನೇತಾರರ ಶ್ರಮ ಹಾಗೂ ಬಲಿದಾನದಿಂದ ಪಡೆದಿರುವ ನಮ್ಮ ದೇಶದ ಸ್ವಾತಂತ್ರ್ಯಜವನ್ನು ಸ್ವೇಚ್ಛೆಯೆಂದು ಭಾವಿಸಬಾರದು ಪ್ರಜಾಪ್ರಭುತ್ವ ತಳಹದಿಯಲ್ಲಿ ನಿಂತಿರುವ ಭಾರತದ ಸ್ವಾಭಿಮಾನವನ್ನು ನಾವೆಲ್ಲರೂ ಎತ್ತಿ ಹಿಡಿಯಬೇಕು ಎಂದು ಕರೆ ನೀಡಿದರು.ಭಾರತ ಒಕ್ಕೂಟ ವ್ಯವಸ್ಥೆಯಲ್ಲಿ ಶಾಂತಿ, ಸಹಬಾಳ್ವೆ ಮೂಲಭೂತವಾಗಿದೆ. ಸಂವಿಧಾನದ ಆಶಯದಡಿಯಲ್ಲಿ ಸಮೃದ್ಧ ಹಾಗೂ ಬಲಿಷ್ಠ ಭಾರತ ನರ್ಮಾ್ಣ ಮಾಡಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದರು.

ತ್ರಿವಿಧ ದಾಸೋಹಿ, ಪದ್ಮಭೂಷಣ, ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರನ್ನು ಸ್ಮರಿಸಿದ ಸಚಿವ ಡಾ. ಜಿ. ಪರಮೇಶ್ವರ್ ಅವರು, ಸಂವಿಧಾನ ರಚನಕಾರರಲ್ಲಿ ಒಬ್ಬರಾದ ಕರ್ನಾಟಕದ ಬೆನಗಲ್ ನರಸಿಂಗರಾವ್ ಅವರು ಸಹ ಉತ್ತಮ ಅಂಶಗಳನ್ನು ನಮ್ಮ ಸಂವಿಧಾನಕ್ಕೆ ಸೇರಿಸಿದ್ದಾರೆ. ಹಾಗಾಗಿ ನಮ್ಮ ಸಂವಿಧಾನವು ಅತ್ಯಂತ ವಿಭಿನ್ನವಾದುದು. ಪ್ರಪಂಚದ ಹಲವಾರು ಸಂವಿಧಾನಗಳನ್ನು ಅಧ್ಯಯನ ಮಾಡಿ, ಭಾರತೀಯ ಸಮಾಜಕ್ಕೆ ಪೂರಕವಾಗುವ ಉತ್ತಮ ಅಂಶಗಳನ್ನು ಸಂವಿಧಾನದಲ್ಲಿ ಅಳವಡಿಸಿಕೊಳ್ಳಲಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜ್ಯೋತಿಗಣೇಶ್ ವಹಿಸಿದ್ದರು. ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ, ವಿಧಾನ ಪರಿಷತ್ ಸದಸ್ಯರಾದ ಆರ್. ರಾಜೇಂದ್ರ, ಬಿಎಂಟಿಸಿ ನಿಗಮದ ಉಪಾಧ್ಯಕ್ಷ ನಿಕೇತ್‌ರಾಜ್ ಮರ್ಯಚ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ಮಹಾನಗರ ಪಾಲಿಕೆ ಆಯುಕ್ತೆ ಶುಭ, ತಹಶೀಲ್ದಾರ್ ರಾಜೇಶ್ವರಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ, ಮಹಿಳಾ ಪೊಲೀಸ್ ತಂಡ, ಪೊಲೀಸ್ ಬ್ಯಾಂಡ್ ತಂಡ, ಗೃಹ ರಕ್ಷದ ದಳ, ಅರಣ್ಯ ಇಲಾಖೆ ತಂಡ, ಕಲ್ಪತರು ಪಡೆ, ಪೌರ ಕರ್ಮಿಿಕರ ತಂಡ, ವಿಕಲಚೇತನರ ತಂಡ, ವಿವಿಧ ಶಾಲಾ ಮಕ್ಕಳ ಭಾರತ್ ಸ್ಕೌಟ್ಸ್ ಮತ್ತು ಗೈಡ್ ತಂಡಗಳು ಸೇರಿದಂತೆ ಸುಮಾರು 25 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.